ಕೂಡಿಗೆ, ನ. ೧೨: ಕೂಡಿಗೆ ಗ್ರಾಮ ಪಂಚಾಯಿತಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಭೇಟಿ ನೀಡಿ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ, ಕಚೇರಿಯನ್ನು ಪರಿಶೀಲನೆ ನಡೆಸಿದರು.
ನಂತರ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನೂತನವಾಗಿ ನಿರ್ಮಿತವಾದ ಉದ್ಯಾನವನ ಹಾಗೂ ಸಮೀಪದ ಗ್ರಾಮದಲ್ಲಿ ಹೊಸದಾಗಿ ಅಳವಡಿಕೆ ಮಾಡಿರುವ ಜಲ ಜೀವನ ಕುಡಿಯುವ ನೀರಿನ ಯೋಜನೆಯ ಸ್ಥಳ ಪರಿಶೀಲನೆ ಮಾಡಿದರು.
ಬ್ಯಾಡಗೊಟ್ಟ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಕಸ ವಿಲೇವಾರಿ ಘಟಕ, ಹೊಸದಾಗಿ ಪ್ರಾರಂಭ ಮಾಡಿರುವ ಸಸ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಬಯಲು ಗ್ರಂಥಾಲಯದಲ್ಲಿ ಕುಳಿತು ಪತ್ರಿಕೆ ಓದುವ ಮೂಲಕ ಗ್ರಂಥಾಲಯಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಉಪ ಕಾರ್ಯದರ್ಶಿ ಲಕ್ಷಿö್ಮ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡೂ, ಜಿಲ್ಲಾ ಪಂಚಾಯಿತಿ ಸಹ ಕಾರ್ಯದರ್ಶಿ ಜೀವನ್ ಕುಮಾರ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರವೀಶ್, ಕುಡಿಯುವ ನೀರು ಮತ್ತು ನೈಮಲ್ಯಯ ಇಲಾಖೆಯ ಇಂಜಿನಿಯರ್ ಶಿವಪ್ರಸಾದ್, ತಾಲೂಕು ಪಂಚಾಯಿತಿ ಇಂಜಿನಿಯರ್ ವಿರೇಂದ್ರ ಕುಮಾರ್, ಇಂಜಿನಿಯರ್ ಕೀರ್ತನ್, ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್, ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ, ಉದ್ಯೋಗ ಖಾತರಿ ವಿಭಾಗದ ಇಂಜಿನಿಯರ್ ಕಿಶೋರ್ ಕುಮಾರ್ ಸೇರಿದಂತೆ ಅಧಿಕಾರಿ ವರ್ಗದವರು ಹಾಜರಿದ್ದರು.