ಮಡಿಕೇರಿ,ನ.೧೧: ಕಾಂಗ್ರೆಸ್ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ ಅವರಿಗೆ ಅನಾಮಧೇಯ ಪತ್ರದ ಮೂಲಕ ಕೊಲೆ ಬೆದರಿಕೆ ಒಡ್ಡಲಾಗಿದ್ದು, ಈ ಸಂಬAಧ ಮೈನಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಸಾಮಾಜಿಕ ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಕೊಲೆ ಮಾಡುವದಾಗಿ ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದ್ದು, ಈ ಹಿನ್ನೆಲೆಯಲ್ಲಿ ಅನಾಮಧೇಯ ವ್ಯಕ್ತಿಯನ್ನು ಬಂಧಿಸುವದರೊAದಿಗೆ ತಮಗೆ ಹಾಗೂ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ದೂರಿನಲ್ಲಿ ಕೋರಲಾಗಿದೆ.