ನ್ಯಾಯಾಧೀಶ ಸುಬ್ರಮಣ್ಯ

ವೀರಾಜಪೇಟೆ, ನ. ೧೧: ಭಾರತ ದೇಶದ ಪ್ರಜೆಗಳಾಗಿ ಪ್ರತಿಯೊಬ್ಬರೂ ಕಾನೂನು ಅರಿವು ಪಡೆದುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶ ಎನ್. ಸುಬ್ರಮಣ್ಯ ಹೇಳಿದರು.

ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಕ್ಷಣ ಹಾಗೂ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವೀರಾಜಪೇಟೆ ಪಟ್ಟಣ ಪಂಚಾಯಿತಿ, ವಕೀಲರ ಸಂಘದ ನ್ಯಾಯಾಧೀಶ ಸುಬ್ರಮಣ್ಯ

ವೀರಾಜಪೇಟೆ, ನ. ೧೧: ಭಾರತ ದೇಶದ ಪ್ರಜೆಗಳಾಗಿ ಪ್ರತಿಯೊಬ್ಬರೂ ಕಾನೂನು ಅರಿವು ಪಡೆದುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶ ಎನ್. ಸುಬ್ರಮಣ್ಯ ಹೇಳಿದರು.

ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಕ್ಷಣ ಹಾಗೂ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವೀರಾಜಪೇಟೆ ಪಟ್ಟಣ ಪಂಚಾಯಿತಿ, ವಕೀಲರ ಸಂಘದ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಜಿ. ಲೋಕೇಶ್ ಮಾತನಾಡಿ ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಪ್ರತಿ ಹಳ್ಳಿ ಹಳ್ಳಿಗೂ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಗ್ರಾಮೀಣ ಪ್ರದೇಶದ ಜನರು ಇದರ ಸದುಪಯೋಗವನ್ನು ಪಡೆದು ಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಮಹಿಳೆಯು ಯಾವುದರಲ್ಲಿಯೂ ಕಡಿಮೆ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಪುರುಷರಷ್ಟೆ ಸರಿ ಸಮಾನವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆಯನ್ನು ಎಲ್ಲಿ ಗೌರವಿಸು ತ್ತಾರೊ ಅಲ್ಲಿ ದೇವರಿರುತ್ತಾರೆ. ಮಹಿಳೆ ಕಲಿತರೆ ಕುಟುಂಬವೆ ಕಲಿತಂತೆ. ಕಾನೂನಿನ ಬಗ್ಗೆ ಪ್ರತಿಯೊಬ್ಬರೂ ತಿಳಿದು ಕೊಂಡಲ್ಲಿ ಅಹಿತಕರ ಘಟನೆಗಳು ಕಡಿಮೆಯಾಗಲು ಸಾಧ್ಯ ಎಂದರು. ವೇದಿಕೆಯಲ್ಲಿದ್ದ ಸಿವಿಲ್ ನ್ಯಾಯಾಧೀಶರಾದ ಮಹಾಲಕ್ಷಿö್ಮ ಮಾತನಾಡಿದರು.

ವೀರಾಜಪೇಟೆ ತಹಶೀಲ್ದಾರ್ ಆರ್. ಯೋಗಾನಂದ ಸರ್ಕಾರದ ಯೋಜನೆಯಲ್ಲಿ ಮಹಿಳೆಯರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಕೀಲೆ ಕೆ.ಎಂ. ಮೀನಾಕುಮಾರಿ ತಮ್ಮ ಉಪನ್ಯಾಸದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಸೌಲಭ್ಯಗಳ ಬಗ್ಗೆ, ವಕೀಲೆ ಸಿ.ಬಿ. ಅನಿತಾ ಪೋಕ್ಸೋ ಕಾಯ್ದೆ ಬಗ್ಗೆ ಹಾಗೂ ಅನುಪಮ ಕಿಶೋರ್ ಮಹಿಳೆಗೆ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಐ.ಆರ್. ಪ್ರಮೋದ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರ ಕುಮಾರ್ ಮತ್ತು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಜೋತಿ ಮಹಿಳೆಯರಿಗೆ ಕಾನೂನು ಬಗ್ಗೆ ತಿಳಿಸಿದರು. ಸಭೆಯಲ್ಲಿ ಅಂಗನವಾಡಿ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.