ಸೋಮವಾರಪೇಟೆ, ನ. ೧೧: ರಾಷ್ಟಿçÃಯ ಮತದಾನ ದಿನಾಚರಣೆ ಅಂಗವಾಗಿ ಸ್ಥಳೀಯ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಹಾಗೂ ಪೋಸ್ಟರ್ ಮೇಕಿಂಗ್ ಸ್ಪರ್ಧೆ ನಡೆಯಿತು.
ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಬೆಳ್ಳಿಯಪ್ಪ, ದೇಶದ ಸಂಪತ್ತಾದ ಯುವ ಸಮುದಾಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಬೇಕು ಎಂದು ಕರೆ ನೀಡಿದರು.
ದೊಡ್ಡ ಪ್ರಜಾಪ್ರಭುತ್ವ ರಾಷ್ಟçದಲ್ಲಿ ಶೇ. ೧೦೦ರಷ್ಟು ಮತದಾನ ವಾಗಬೇಕು. ಆದರೆ ಕೆಲವು ಸಂದರ್ಭ ಅರ್ಧದಷ್ಟು ಮತದಾನ ವಾಗುವುದನ್ನು ಕೇಳಿದ್ದೇವೆ. ಈ ನಿಟ್ಟಿನಲ್ಲಿ ಮತದಾರರ ಸಾಕ್ಷರತೆ ಆಗಬೇಕಾಗಿದೆ. ಈ ಕಾರಣದಿಂದ ಸರ್ಕಾರ ಯುವಕರಲ್ಲಿ ಮತದಾನ ಅರಿವು ಮೂಡಿಸುವ ಯೋಜನೆ ರೂಪಿಸಿದೆ ಎಂದರು.
ತಾಲೂಕಿನ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಲಲಿತ, ತಿಲೋತ್ತಮೆ, ಚಂದ್ರಶೇಖರ್ ಉಪಸ್ಥಿತರಿದ್ದರು.