ಮಡಿಕೇರಿ, ನ. ೧೧: ವನ-ಧನ ವಿಕಾಸ ಕೇಂದ್ರಗಳ ಅನುಷ್ಠಾನಕ್ಕೆ ಸಂಬAಧಿಸಿದAತೆ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ ಅವರು ಬುಡಕಟ್ಟು ಜನರು ಅರಣ್ಯದಲ್ಲಿ ಸಂಗ್ರಹಿಸುವ ಕಿರು ಅರಣ್ಯ ಉತ್ಪನ್ನಗಳಿಗೆ ಉತ್ತಮ ಬೆಲೆ ಕಲ್ಪಿಸುವಲ್ಲಿ ವನ-ಧನ ವಿಕಾಸ ಕೇಂದ್ರ ತೆರೆಯಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಅವಕಾಶ ಮಾಡಿದೆ ಎಂದು ತಿಳಿಸಿದರು.

ಕಿರು ಅರಣ್ಯ ಉತ್ಪನ್ನಗಳಿಗೆ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮ ಅನುಷ್ಠಾನ ಸಂಬAಧ ವನ-ಧನ ಕೇಂದ್ರಗಳನ್ನು ಸ್ಥಾಪಿಸಿ ಕಿರು ಅರಣ್ಯ ಉತ್ಪನ್ನಗಳ ಮೌಲ್ಯವರ್ಧಿತ ಮಾರುಕಟ್ಟೆ ಸೃಜಿಸುವ ಮೂಲಕ ಬುಡಕಟ್ಟು ಜನರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಜಿಲ್ಲೆಯಲ್ಲಿ ವನ ಧನ ವಿಕಾಸ ಕೇಂದ್ರ ಸ್ಥಾಪಿಸಲು ಕನಿಷ್ಟ ೧೫ ಸ್ವಸಹಾಯ ಸಂಘಗಳ ೨೦ ಸದಸ್ಯರನ್ನು ಒಳಗೊಂಡ ೩೦೦ ಸದಸ್ಯರನ್ನು ಆಯ್ಕೆ ಮಾಡಬೇಕಿದೆ ಎಂದು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಲ್ಯಾಂಪ್ಸ್ ಸಹಕಾರದೊಂದಿಗೆ ವನ-ಧನ ವಿಕಾಸ ಕೇಂದ್ರ ಸ್ಥಾಪಿಸಲು ೩೦೦ ಸದಸ್ಯರನ್ನು ಗುರುತಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಮೂರು ಸಂಘಗಳನ್ನು ಗುರುತಿಸಲಾಗಿದ್ದು, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಸಂವರ್ಧನೆ (ಎನ್‌ಆರ್‌ಎಲ್‌ಎಂ)ಯಡಿ ನಾಗರಹೊಳೆಯಲ್ಲಿ ಜೇನು ಸಾಕಾಣಿಕೆ ಮತ್ತು ಸಂರಕ್ಷಣೆ ಹಾಗೂ ಲ್ಯಾಂಟೇನಾ ಪೀಠೋಪಕರಣ ತಯಾರಿಕೆ, ಬಸವನಹಳ್ಳಿಯಲ್ಲಿ ಸೀಗೆಹುಡಿ ಸಂಗ್ರಹಣೆ ಮತ್ತು ಸಂಸ್ಕರಣೆ ಹಾಗೂ ಬಿದಿರಿನಿಂದ ಬುಟ್ಟಿ ಮತ್ತು ಕರಕುಶಲ ವಸ್ತುಗಳ ತಯಾರಿಕೆ, ಹಾಗೆಯೇ ಮಡಿಕೇರಿ ತಾಲೂಕಿನ ಮದೆ ಗ್ರಾಮದಲ್ಲಿ ಜೇನು ಸಂಗ್ರಹಣೆ ಹಾಗೂ ಸಂರಕ್ಷಣೆ ಜೊತೆಗೆ ಕಾಚಂಪುಳಿ ತಯಾರಿಕೆ ಘಟಕ ಆರಂಭಿಸಲು ಈ ಸಂಘಗಳನ್ನು ಸ್ಥಾಪಿಸಲಾಗಿದೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ ಅವರು ಹೇಳಿದರು.

ಬಸವನ ಹಳ್ಳಿ ವ್ಯಾಪ್ತಿಯ ೨೭ ಸಂಘದಿAದ ೩೫೪ ಸದಸ್ಯರು, ನಾಗರಹೊಳೆ ೨೨ ಸಂಘದಿAದ ೨೯೮ ಸದಸ್ಯರು, ಮಡಿಕೇರಿ ತಾಲೂಕಿನ ಮದೆ ಗ್ರಾಮದ ೨೬ ಸಂಘದಿAದ ೨೪೦ ಸದಸ್ಯರು ಇದ್ದು, ಈ ಸಂಘಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕಾರಿ ಮಂಡಳಿ ರಚಿಸಲಾಗಿದೆ ಎಂದು ಶ್ರೀನಿವಾಸ ಅವರು ಮಾಹಿತಿ ನೀಡಿದರು.

ಕಿರು ಅರಣ್ಯ ಉತ್ಪನ್ನ ಸಂಬAಧಿಸಿದAತೆ ಮೂರು ತಾಲೂಕಿನ ಮೂರು ಸ್ವಸಹಾಯ ಸಂಘದ ೨೦ ಮಂದಿಗೆ ತರಬೇತಿ ನೀಡಲಾಗುತ್ತದೆ. ಈ ೨೦ ಮಂದಿ ಉಳಿದ ಸದಸ್ಯರಿಗೆ ಮಾಹಿತಿ ನೀಡಲಿದ್ದಾರೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಅವರು ತಿಳಿಸಿದರು.

‘ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಮಾಹಿತಿ ಪಡೆದು ಮಾತನಾಡಿ, ವನ-ಧನ ವಿಕಾಸ ಕೇಂದ್ರ ತೆರೆಯುವ ಸಂಬAಧ ಮಾತನಾಡಿ ಬುಡಕಟ್ಟು ಜನರು ಅರಣ್ಯದಲ್ಲಿ ಸಂಗ್ರಹಿಸುವ ಕಿರು ಅರಣ್ಯ ಉತ್ಪನ್ನ ಸಂಬAಧಿಸಿದAತೆ ಅರಣ್ಯ ಇಲಾಖೆ ಜೊತೆ ಸಮನ್ವಯ ಸಾಧಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.’

ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನದ ಸಮನ್ವಯ ಅಧಿಕಾರಿ ಕುಮಾರ್ ಅವರು ವನಧನ ಕಾರ್ಯಕ್ರಮ ಅನುಷ್ಠಾನ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಷಾ, ನಗರಸಭೆಯ ರೇಖಾ, ಬಿಸಿಎಂ ಇಲಾಖೆ ಅಧಿಕಾರಿ ಕವಿತಾ, ಐಟಿಡಿಪಿ ಇಲಾಖೆಯ ವ್ಯವಸ್ಥಾಪಕರಾದ ದೇವರಾಜು, ನವೀನ್, ಇತರರು ಇದ್ದರು.