ಮಡಿಕೇರಿ, ನ. ೧೧: ಭಾರತ ದೇಶಕ್ಕೆ ಸ್ವಾತಂತ್ರ‍್ಯ ಬಂದು ೭೫ ವರ್ಷಗಳು ಆಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಅಮೃತ ಮಹೋತ್ಸವ’ ಆಚರಿಸಲಾಗುತ್ತಿದೆ. ಮತ್ತೊಂದೆಡೆ ಕಾನೂನು ಸೇವೆಗಳ ಕಾಯ್ದೆಯ ಪ್ರಕಾರ ಕಾನೂನು ಸೇವಾ ಪ್ರಾಧಿಕಾರಗಳು ಸ್ಥಾಪನೆಗೊಂಡು ೨೫ ವರ್ಷಗಳಾಗಿವೆ. ಈ ಸಂದರ್ಭದಲ್ಲಿ ರಜತ ಮಹೋತ್ಸವವನ್ನು ಆಚರಿಸಲಾಗುತ್ತಿದೆ.
ಈ ಎರಡು ಸುಸಂದರ್ಭಗಳ ಪ್ರಯುಕ್ತ ‘ಪಾನ್ ಇಂಡಿಯಾ ಎವರ್‌ನೆಸ್ ಅಂಡ್ ಔಟ್‌ರೀಚ್ ಕ್ಯಾಂಪೈನ್ ಎಂಬ ಶಿರ್ಷೀಕೆ ಅಡಿಯಲ್ಲಿ ಪ್ರತಿಯೊಂದು ಹಳ್ಳಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಪ್ರತಿ ನಾಗರಿಕನಿಗೆ ಕಾನೂನು ಅರಿವು ಮೂಡಿಸಲು ಮತ್ತು ಸರ್ಕಾರಗಳಿಂದ ದೊರೆಯುವ ಸೌಲಭ್ಯಗಳ ಕುರಿತು ಜಾಗೃತಿ ಉಂಟುಮಾಡುವAತೆ ರಾಷ್ಟಿçÃಯ ಕಾನೂನು ಸೇವಾ ಪ್ರಾಧಿಕಾರದಿಂದ ಎಲ್ಲಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಿದೆ.
ಆ ದಿಸೆಯಲ್ಲಿ ಕೊಡಗು ಜಿಲ್ಲೆಯ ಪ್ರತಿ ಹಳ್ಳಿಯಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಡಿಸೆಂಬರ್ ೧೪ ರವರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಸೇವಾ ಸಮಿತಿಗಳ ಮೂಲಕ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣ್ಯ ಮಾಹಿತಿ ನೀಡಿದ್ದಾರೆ.
ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಮಾಹಿತಿ ನೀಡುವುದು, ಉಚಿತ ಕಾನೂನಿನ ನೆರವು ಮತ್ತು ಸಲಹೆ ನೀಡುವುದು ಹಾಗೂ ಲೋಕ್ ಅದಾಲತ್‌ಗಳ ಮೂಲಕ ನ್ಯಾಯಾಲಯಗಳಲ್ಲಿ ಅಥವಾ ಇತರ ಕಚೇರಿಗಳಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದಿAದ ಇತ್ಯರ್ಥಗೊಳಿಸುವುದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಸೇವಾ ಸಮಿತಿಗಳ ಉದ್ದೇಶವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.
೧೯೮೭ರ ಕಾನೂನು ಸೇವೆಗಳ ಪ್ರಾಧಿಕಾರದ ಕಲಂ ೧೨ ರ ಪ್ರಕಾರ, ಉಚಿತ ಕಾನೂನಿನ ನೆರವು ಮತ್ತು ಸಲಹೆಯನ್ನು ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ, ಮಹಿಳೆ ಮತ್ತು ಮಕ್ಕಳಿಗೆ, ಮಾನವ ಕಳ್ಳ ಸಾಗಾಣಿಕೆ ಅಥವಾ ಭಿಕ್ಷಾಟನೆಗೆ ಗುರಿಯಾದವರಿಗೆ, ವಿಶೇಷಚೇತನ ಮತ್ತು ಇತರ ನ್ಯೂನ್ಯತೆಗಳನ್ನು ಹೊಂದಿದವರಿಗೆ, ನೈಸರ್ಗಿಕ ವಿಕೋಪಗಳಿಗೆ ತುತ್ತಾದವರಿಗೆ, ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ, ಮತೀಯ ಕಾರಣದಿಂದ ದೌರ್ಜನ್ಯಕ್ಕೆ ಒಳಗಾದವರಿಗೆ, ರಕ್ಷಣಾ ಗೃಹ ಅಥವಾ ಮಡಿಕೇರಿ, ನ. ೧೧: ಭಾರತ ದೇಶಕ್ಕೆ ಸ್ವಾತಂತ್ರ‍್ಯ ಬಂದು ೭೫ ವರ್ಷಗಳು ಆಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಅಮೃತ ಮಹೋತ್ಸವ’ ಆಚರಿಸಲಾಗುತ್ತಿದೆ. ಮತ್ತೊಂದೆಡೆ ಕಾನೂನು ಸೇವೆಗಳ ಕಾಯ್ದೆಯ ಪ್ರಕಾರ ಕಾನೂನು ಸೇವಾ ಪ್ರಾಧಿಕಾರಗಳು ಸ್ಥಾಪನೆಗೊಂಡು ೨೫ ವರ್ಷಗಳಾಗಿವೆ. ಈ ಸಂದರ್ಭದಲ್ಲಿ ರಜತ ಮಹೋತ್ಸವವನ್ನು ಆಚರಿಸಲಾಗುತ್ತಿದೆ.