ಗೋಣಿಕೊಪ್ಪಲು, ನ.೧೩: ದಲಿತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ನ.೧೪ (ಇಂದು) ಗೋಣಿಕೊಪ್ಪಲುವಿನಲ್ಲಿ ಪ್ರತಿಭಟನೆ ನಡೆಯಲಿದೆ.
ಪಾಲಿಬೆಟ್ಟ ರಸ್ತೆಯಿಂದ ಮೆರವಣಿಗೆ ಆರಂಭಿಸಿ ಉಮಾಮಹೇಶ್ವರಿ ದೇವಾಲಯ ಸಮೀಪ ಮೆರವಣಿಗೆಯು ಅಂತ್ಯಗೊಳ್ಳಲಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಆರ್.ಪರಶುರಾಮ್ ತಿಳಿಸಿದ್ದಾರೆ.
ನೂರಾರು ಮಂದಿ ಮೆರವಣಿಗೆಯಲ್ಲಿ ಸಾಗಿ ಸರ್ಕಾರದ ಗಮನ ಸೆಳೆಯುವ ಮೂಲಕ ದಲಿತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಕೂಡಲೇ ಸರ್ಕಾರ ಸ್ಪಂದಿಸಬೇಕೆAದು ಒತ್ತಾಯಿಸಲಾಗುವುದು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು.
ಪ್ರತಿಭಟನೆಯ ನಂತರ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ತಾಲೂಕಿನ ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸ ಲಾಗುವುದು. ದಸಂಸ ರಾಜ್ಯಾಧ್ಯಕ್ಷ ಗುರುಪ್ರಸಾದ್ ಕೆರೆಗೋಡು ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.