ಮಡಿಕೇರಿ, ನ. ೧೩: ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಚುರುಕುಗೊಳಿಸುವಂತೆ ಮತದಾರರ ಪಟ್ಟಿ ವೀಕ್ಷಕ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ನಿರ್ದೇಶನ ನೀಡಿದರು.
ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬAಧಿಸಿದAತೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜನವರಿ ೧, ೨೦೨೨ ರ ಅರ್ಹತಾ ದಿನಾಂಕದAತೆ ೧೮ ವರ್ಷ ಮೇಲ್ಪಟ್ಟ ಎಲ್ಲರೂ ಸಹ ಭಾವಚಿತ್ರವಿರುವ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು. ಆ ನಿಟ್ಟಿನಲ್ಲಿ ಕಾಲೇಜು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ವಿಶೇಷ ಅಭಿಯಾನ ಹಮ್ಮಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಶ್ರಮಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
೧೮ ವರ್ಷ ಮೇಲ್ಪಟ್ಟ ಯಾರೂ ಸಹ ಮತದಾರರ ಪಟ್ಟಿಯಿಂದ ವಂಚಿತರಾಗಬಾರದು. ಆ ದಿಸೆಯಲ್ಲಿ ಬಿಎಲ್ಒಗಳು ತಮ್ಮ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ಹೆಸರು ಸೇರ್ಪಡೆ ಮಾಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರು ತೆಗೆಯಲು ಕ್ರಮವಹಿಸಬೇಕು. ಹೆಸರು ತೆಗೆಯುವ ಮೊದಲು ಸಂಬAಧಪಟ್ಟ ಕುಟುಂಬದವರ ಗಮನಕ್ಕೆ ತರಬೇಕು. ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿಯಲ್ಲಿ ಯಾವುದಾದರೂ ತಪ್ಪು ಇದ್ದಲ್ಲಿ ತಿದ್ದುಪಡಿ ಮಾಡಬೇಕು. ಜೊತೆಗೆ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಮತದಾರರ ಇಚ್ಛೆಯಂತೆ ವರ್ಗಾವಣೆ ಮಾಡಲು ಕ್ರಮವಹಿಸಬೇಕು.
ಭಾರತ ಚುನಾವಣಾ ಆಯೋಗವು ನವೆಂಬರ್ ತಿಂಗಳ ಪ್ರತೀ ಭಾನುವಾರ ವಿಶೇಷ ನೋಂದಣಿ ಅಭಿಯಾನ (ನ.೧೪, ೨೧, ಮತ್ತು ೨೮) ಹಮ್ಮಿಕೊಂಡಿದ್ದು, ಈ ಬಗ್ಗೆ ಬಸ್ ನಿಲ್ದಾಣ, ಜನ ದಟ್ಟಣೆ ಪ್ರದೇಶಗಳು, ಕಾಲೇಜುಗಳು, ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು, ಆದರೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿಲ್ಲ ಎಂಬ ದೂರುಗಳು ಕೇಳಿ ಬರಬಾರದು. ಆದ್ದರಿಂದ ಈ ಬಗ್ಗೆ ಪರಿಶೀಲಿಸಬೇಕು. ಆನ್ಲೈನ್ನಲ್ಲಿ ಮತದಾರರ ಪಟ್ಟಿಗೆ ಅರ್ಜಿ ಸಲ್ಲಿಸಿದರೆ ನಿಖರವಾಗಿ ದಾಖಲಾಗುತ್ತದೆ. ಆದರೆ ಮ್ಯಾನ್ಯುಯಲ್ನಲ್ಲಿ ಅರ್ಜಿ ಪಡೆಯುವಾಗ ಬಹಳ ನಿಗಾವಹಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ಹೇಳಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬAಧ ಮ್ಯಾನ್ಯುಯಲ್ನಲ್ಲಿ ಸಲ್ಲಿಸುವ ಅರ್ಜಿಗಳನ್ನು ಪ್ರತೀ ಬೂತ್ಮಟ್ಟದಲ್ಲಿ ಎಷ್ಟು ಅರ್ಜಿಗಳು ಸಲ್ಲಿಕೆಯಾಗಿವೆ ಎಂಬ ಬಗ್ಗೆ ನಿಖರವಾಗಿ ಪರಿಶೀಲಿಸಲಾಗುವುದು ಎಂದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ತಹಶೀಲ್ದಾರ್ ಮಹೇಶ್ ಅವರು ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬAಧಿಸಿದAತೆ ಮಾಹಿತಿ ನೀಡಿದರು. ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು.