ಮಡಿಕೇರಿ, ನ. ೧೨: ಕರ್ನಾಟಕ ಸಾಹಿತ್ಯ ಅಕಾಡೆಮಿಯು ೨೦೨೧ ರ ಡಿಸೆಂಬರ್ ತಿಂಗಳಿನಲ್ಲಿ ಗಿರಿಜನ ಉಪಯೋಜನೆಯಡಿ ರಾಜ್ಯಮಟ್ಟದ ಹತ್ತು ದಿನಗಳ ಭಾಷಾ ಕೌಶಲ ಮತ್ತು ಕರಡು ತಿದ್ದುವಿಕೆ ಕಮ್ಮಟವನ್ನು ನಡೆಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ ೨೦ ರಿಂದ ೪೫ ವರ್ಷ ವಯಸ್ಸಿನ ರಾಜ್ಯದ ಎಲ್ಲಾ ಭಾಗದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿgಯಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಎನ್. ಕರಿಯಪ್ಪ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ
ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್‌ಸೈಟ್ ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ssಠಿ.ಠಿosಣmeಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, (ಮೆಟ್ರಿಕ್ ವಂತರದ ಕೋರ್ಸುಗಳಿಗೆ ಆದಾಯದ ಮಿತಿ ೨.೫೦ ಲಕ್ಷ ಮತ್ತು ಮೆಟ್ರಿಕ್ ಪೂರ್ವ ೧ ರಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ೬ ಲಕ್ಷ, ಹಾಗೂ ೯ ಮತ್ತು ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ೨.೫೦ ಲಕ್ಷ ಆದಾಯ ಮಿತಿಗೊಳಿಸಲಾಗಿದೆ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್, (ಕಡ್ಡಾಯವಾಗಿ ಆದಾರ್ ಸೀಡಿಂಗ್ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಮಾಡಿಸಿರತಕ್ಕದ್ದು), ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಮೆಟ್ರಿಕ್ ನಂತರದ ಕೋರ್ಸುಗಳಿಗೆ ಆಧ್ಯಯನ/ ಬೋನಾಪೈಡ್ ಪ್ರಮಾಣ ಪತ್ರ ಕಡ್ಡಾಯ, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವೆಬ್‌ಸೈಟ್ ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ತಿತಿತಿ.ssಠಿ. ಠಿosಣmeಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-೦೮೨೭೪-೨೬೧೨೬೧., ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- ೦೮೨೭೨-೨೨೩೫೫೨., ಸಹಾಯಕ ನಿರ್ದೇಶಕರು (ಗ್ರೇಡ್-೨), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-೦೮೨೭೬-೨೮೧೧೧೫. ಸಂಪರ್ಕಿಸಬಹುದಾಗಿದೆ ಎಂದು ಯೋಜನಾ ಸಮನ್ವಾದಿಕಾರಿ ಶ್ರೀನಿವಾಸ್ ಅವರು ಕೋರಿದ್ದಾರೆ.
ಸಹಾಯಧನ ಸೌಲಭ್ಯಕ್ಕೆ
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೧-೨೨ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿ ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: ತಿತಿತಿ.ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಭೇಟಿ ನೀಡಬೇಕಾದ ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು. ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫/ ೮೦೫೦೭೭೦೦೦೪ ಇmಚಿiಟ: bಛಿತಿಜ.sಛಿhoಟಚಿಡಿshiಠಿ @ಞಚಿಡಿಟಿಚಿಣಚಿಞಚಿ.gov.iಟಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂ. ೦೮೦-೩೫೨೫೪೭೫೭ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.