ಮಡಿಕೇರಿ, ನ.೧೨: ಜಿಲ್ಲೆಯಲ್ಲಿರುವ ೧೧ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಪ್ರತಿ ಶಾಲೆಗೆ ಒಬ್ಬರಂತೆ ೧೧ ಜನ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ನಿಗಧಿಪಡಿಸಿದ ಗುರಿಗೆ ಅರ್ಜಿ ಸ್ವೀಕೃತಗೊಂಡಿರುವುದಿಲ್ಲ. ಆದ್ದರಿಂದ ಅರ್ಜಿ ಸಲ್ಲಿಸಲು ತಾ. ೨೫ ರವರೆಗೆ ಕಾಲಾವಕಾಶ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.೭,೫೦೦ ನಿಗದಿಪಡಿಸಿದೆ. ಇಂಗ್ಲೀಷ್ ಭೋದನಾ ಸಾಮರ್ಥ್ಯವಿರುವ ಹಾಗೂ ಇಂಗ್ಲೀಷ್ ಮಾಧ್ಯಮ ಶಾಲೆಗಳಲ್ಲಿ ಬೋಧನೆ ಮಾಡಿದ ಪದವಿ ಮತ್ತು ಬಿ.ಇಡಿ ಪೂರ್ಣ ಗೊಳಿಸಿದ ಅಭ್ಯರ್ಥಿ ಗಳಾಗಿರಬೇಕು. ಇಂಗ್ಲೀಷ ಐಚ್ಛಿಕ ವಿಷಯದಲ್ಲಿ ಪದವಿ ಮತ್ತು ಬಿ.ಇಡಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಮೊದಲ ಆದ್ಯತೆ ನೀಡಲಾಗುವುದು.

ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆ ಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿ ಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿರವರ ಕಚೇರಿ, ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. ೦೮೨೭೨-೨೦೦೫೦೦ ಮತ್ತು ೯೯೪೫೯೮೬೯೯೫ ನ್ನು ಸಂಪರ್ಕಿಸ ಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಶ್ರೀನಿವಾಸ್ ಅವರು ತಿಳಿಸಿದ್ದಾರೆ.