ಮುಳ್ಳೂರು, ನ. ೧೨: ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತುಮಕೂರು ಸಿದ್ಧಗಂಗಾ ಮಠಾಧೀಶರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಭೇಟಿ ನೀಡಿದರು. ಶ್ರೀಗಳು ಶಾಲೆಗೆ ಭೇಟಿ ನೀಡಿದ ಸಂದರ್ಭ ಶಾಲೆಯ ಭೌತಿಕ ಸೌಂದರ್ಯ ವಾತಾವರಣವನ್ನು ವೀಕ್ಷಿಸಿ ಶಾಲೆಯಲ್ಲಿ ನಿರ್ಮಿಸಿರುವ ಕಾವೇರಿ ಮಾತೆ ಹಾಗೂ ಅಕ್ಷರ ಅಂಗಳಕ್ಕೆ ಪುಷ್ಪಾರ್ಚನೆ ಮಾಡಿದರು.

ನಂತರ ಸ್ವಾಮೀಜಿಗಳು ಶಾಲೆಯ ಮುಖ್ಯ ಶಿಕ್ಷಕ, ಸಹ ಶಿಕ್ಷಕರಿಂದ ಶಾಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಗೋಣಿಮರೂರು ಸರಕಾರಿ ಶಾಲೆಯ ಹಸಿರು ವಾತಾವರಣ, ಶಿಕ್ಷಣಕ್ಕೆ ನೀಡುತ್ತಿರುವ ಪ್ರೋತ್ಸಾಹದ ಕುರಿತು ಸ್ವಾಮೀಜಿ ಪ್ರಶಂಶಿಸಿದರು.

ಈ ಸಂದರ್ಭದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾದೀಶ ಸದಾಶಿವ ಸ್ವಾಮೀಜಿ, ಎಸ್‌ಡಿಎಂಸಿ ಸಮನ್ವಯ ವೇದಿಕೆಯ ರಾಜ್ಯ ಅಧ್ಯಕ್ಷ ಜಿ.ಬಿ.ಸಿದ್ದಲಿಂಗಪ್ಪ, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.