ಮಡಿಕೇರಿ, ನ. ೧೩: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಇದೇ ಪ್ರಥಮ ಬಾರಿಗೆ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ವತಿಯಿಂದ ಬಿ.ಎಸ್ಸಿ. ನರ್ಸಿಂಗ್ ಪದವಿ ಪ್ರವೇಶಕ್ಕೆ ಅವಕಾಶ ಸಿಕ್ಕಿದೆ. ಆ ದಿಸೆಯಲ್ಲಿ ಪ್ರಥಮ ಬಿ.ಎಸ್ಸಿ. ನರ್ಸಿಂಗ್ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಶುಶ್ರೂಷಕ ಅಧೀಕ್ಷಕಿ ವೀಣಾ ಅವರು ವೈದ್ಯಕೀಯ ಕಾಲೇಜಿನಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ನಂಜುAಡೇ ಗೌಡ ಮಾತನಾಡಿ, ವಿದ್ಯಾರ್ಥಿಗಳು ಬೋಧಕರು ನೀಡಿದ ಮಾರ್ಗದರ್ಶ ನದಲ್ಲಿ ಶಿಕ್ಷಣ ಪಡೆಯಬೇಕು ಮತ್ತು ಪ್ರತಿಜ್ಞಾವಿಧಿಯಲ್ಲಿ ಬೋಧಿಸಿದಂತೆ ತಮ್ಮ ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ಉತ್ತಮ ನಡವಳಿಕೆ, ಶಿಸ್ತುಗಳನ್ನು ಅಳವಡಿಸಿಕೊಂಡು ಸಂಸ್ಥೆಯ ಕೀರ್ತಿ ಹೆಚ್ಚಿಸಬೇಕೆಂದು ತಿಳಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ವೈದ್ಯ ಕೀಯ ಅಧೀಕ್ಷಕ ಡಾ. ಮಂಜುನಾಥ ಎಸ್. ನರ್ಸಿಂಗ್ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿದ್ದು, ಆಸ್ಪತ್ರೆಯ ಸೇವೆಗಳು, ನರ್ಸಿಂಗ್ ಕಾಲೇಜಿನಲ್ಲಿ ಬೋಧಕ ಹುದ್ದೆಗಳು ಹಾಗೆಯೇ ನರ್ಸಿಂಗ್ ನಂತರ ಆಡಳಿತಾತ್ಮಕ ಸೇವೆಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು ಎಂದರು.

ಸಂಸ್ಥೆಯ ಶರೀರ ಕ್ರಿಯಾಶಾಸ್ತç ವಿಭಾಗದ ಮುಖ್ಯಸ್ಥ ಡಾ. ನರಸಿಂಹ ರೈ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಎ.ಕೆ. ಮಂಜುಳ ಅವರು ಪ್ರತಿಜ್ಞಾವಿಧಿಯ ಮಹತ್ವ ಮತ್ತು ಫ್ಲೋರೆನ್ಸ್ ನೈಟಿಂಗೇಲ್ ಅವರ ಜೀವನ ಚರಿತ್ರೆ ವಿವರಿಸಿದರು.

ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಗುರುಪಾದ ಕೆ.ಪಿ. ಮತ್ತು ಬೋಧಕ ಆಸ್ಪತ್ರೆಯ ಹಿರಿಯ ಶುಶ್ರೂಷಾಧಿಕಾರಿ ಮೋಹಿನಿ, ವೈದ್ಯಕೀಯ ವಿಜ್ಞಾನ ಸಂಸ್ಥೆ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಅಕಾಡೆಮಿಕ್ ರಿಜಿಸ್ಟಾçರ್ ಡಾ. ರವಿಕಿರಣ್ ಕಿಸಾನ ಇದ್ದರು.

ಶುಶ್ರೂಷಕರಾದ ಮಾರ್ಟಿನ್ ಲೂಥರ್ ಕಿಂಗ್ ಹಾಗೂ ಸಂಜೀವಿನಿ ನಿರೂಪಿಸಿದರು. ಶುಶ್ರೂಷಾಧಿಕಾರಿ ಸುಚಿತ ಸ್ವಾಗತಿಸಿದರು. ಶುಶ್ರೂಷಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಗುರುಪಾದ ಕೆ.ಪಿ. ಅವರು ವಂದಿಸಿದರು.

ನರ್ಸಿಂಗ್ ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ವೃಂದದವರು, ಕಚೇರಿ ಸಿಬ್ಬಂದಿಗಳು ಬೋಧಕ ಆಸ್ಪತ್ರೆಯ ಶುಶ್ರೂಷಾಧಿಕಾರಿಗಳು ಹಾಜರಿದ್ದರು.