ಕೆ.ಜಿ. ಬೋಪಯ್ಯ
ಕರಿಕೆ, ನ. ೧೩: ಮಡಿಕೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಮಿನಿ ವಿಧಾನಸೌಧಕ್ಕೆ ಸರಕಾರದಿಂದ ಎರಡನೇ ಹಂತದ ಅನುದಾನ ಬಿಡುಗಡೆಯಾಗಿ ರುವುದಾಗಿ ಶಾಸಕ ಕೆ.ಜಿ. ಬೋಪಯ್ಯ ‘ಶಕ್ತಿ’ಗೆ ಮಾಹಿತಿ ನೀಡಿದ್ದಾರೆ. ಮಡಿಕೇರಿ ತಾಲೂಕು ಕಚೇರಿಯನ್ನು ಮಿನಿ ವಿಧಾನಸೌಧವಾಗಿ ಮಾರ್ಪಡಿಸಿ ನೂತನ ಕಟ್ಟಡ ನಿರ್ಮಿಸಲು ಮೂರು ಕೋಟಿ ಅನುದಾನ ಬಿಡುಗಡೆ ಮಾಡಿ ಈ ಹಿಂದೆ ಕಾಮಗಾರಿ ಆರಂಭಿಸಲಾಗಿತ್ತು. ಅನುದಾನದ ಕೊರತೆಯಿಂದ ಕಾಮಗಾರಿ ಸ್ಥಗಿತಗೊಂಡಿದ್ದು, ಈ ಬಗ್ಗೆ ಎರಡನೇ ಹಂತದಲ್ಲಿ ಹೆಚ್ಚುವರಿ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.
ಮಿನಿ ವಿಧಾನಸೌಧ ಕಾಮಗಾರಿಗೆ ಅನುದಾನ
(ಮೊದಲ ಪುಟದಿಂದ) ಇದೀಗ ಐದು ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿ ಸರಕಾರದ ಕಂದಾಯ ಇಲಾಖೆ ಕಾರ್ಯದರ್ಶಿ ಕಮಲ ಜಯರಾಂ ಅಧಿಕೃತ ಆದೇಶ ಹೊರಡಿಸಿದ್ದು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ಇಕ್ಕಟಿನ ಪ್ರದೇಶದಲ್ಲಿರುವ ಮಡಿಕೇರಿ ಕಂದಾಯ ಇಲಾಖೆಯ ತಹಶೀಲ್ದಾರರ ಕಚೇರಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಿ ಸಾರ್ವಜನಿಕರ ಸೇವೆಗೆ ನೀಡಲಾಗುವುದು ಎಂದರು.