ಮಡಿಕೇರಿ, ನ. ೧೩: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಅಮ್ಮ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಸುನೀತಾ ಸೇರಿ ೧೪ ಮಂದಿಯ ಕೃತಿಗಳು ಆಯ್ಕೆ ಯಾಗಿವೆ. ಸುನೀತಾ ಅವರು ಬರೆದ ಇಂಜಿಲಗೆರೆ ಪೋಸ್ಟ್ ೨೧ನೇ ವರ್ಷದ ಅಮ್ಮ ಪ್ರಶಸ್ತಿಗೆ ಆಯ್ಕೆಯಾ ಗಿದ್ದು, ತಾ. ೨೬ ರಂದು ಸೇಡಂ ಪಟ್ಟಣದ ಶ್ರೀ ಪಂಚಲಿAಗೇಶ್ವರ ದೇವಾಲಯದ ಶಾಂಭವಿ ರಂಗ ಮಂಟಪದಲ್ಲಿ ಜರುಗುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.