ಸೋಮವಾರಪೇಟೆ,ನ.೧೪: ಸಮೀಪದ ಆಲೆಕಟ್ಟೆ ರಸ್ತೆಯ ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಮುಂಭಾಗ ಇರುವ ಬಸ್ ನಿಲ್ದಾಣ ದುಸ್ಥಿತಿಗೆ ತಲುಪಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ.
ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ಮತ್ತು ವಾಹನಗಳಿಗಾಗಿ ಇಲ್ಲಿಯೇ ಕಾಯುತ್ತಿರುತ್ತಾರೆ. ಈಗಾಗಲೇ ಶಿಥಿಲಾವಸ್ಥೆಗೆ ತಲುಪಿರುವ ನಿಲ್ದಾಣದ ಮೇಲ್ಛಾವಣಿ ಯಾವಾಗ ಬೇಕಾದರೂ ಬೀಳುವ ಹಂತದಲ್ಲಿದ್ದು, ಕೂಡಲೇ ಇದನ್ನು ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.