ಮಡಿಕೇರಿ, ನ. ೧೩: ಕರ್ನಾಟಕ ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಕ್ಷೇತ್ರದಿಂದ ನಡೆಯುವ ಚುನಾವಣೆ ೨೦೨೧ರ ಸಂಬAಧ ಮುಖ್ಯ ಚುನಾವಣಾಧಿಕಾರಿಯವರ ನಿರ್ದೇಶನದಂತೆ ಕೊಡಗು ಸ್ಥಳೀಯ ಸಂಸ್ಥೆಗಳಿಗೆ ಸಂಬAಧಿಸಿದAತೆ ಕರಡು ಮತದಾರರ ಪಟ್ಟಿಯನ್ನು ತಾ. ೧೧ ರಂದು ಪ್ರಕಟಿಸಲಾಗಿದೆ.

ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕಚೇರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಕೊಡಗು ಜಿಲ್ಲಾ ಪಂಚಾಯತ್ ಮಡಿಕೇರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲೆಯ ತಾಲೂಕು ತಹಶೀಲ್ದಾರರ ಕಚೇರಿ, ತಾಲೂಕು ಪಂಚಾಯಿತಿಗಳ ಕಚೇರಿ, ನಗರಸಭೆ ಕಚೇರಿಯಲ್ಲಿ, ಪಟ್ಟಣ ಪಂಚಾಯಿತಿ ಕಚೇರಿಗಳಲ್ಲಿ ಮತ್ತು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪ್ರಕಟಿಸಲಾಗಿರುತ್ತದೆ. ಈ ಸಂಬAಧ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಸದರಿ ಕರಡು ಮತದಾರರ ಪಟ್ಟಿ ಕುರಿತು ಹಕ್ಕು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ತಾ. ೧೮ ರೊಳಗೆ ಪೂರಕ ದಾಖಲೆಗಳೊಂದಿಗೆ ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ ಮಡಿಕೇರಿ ಇವರಿಗೆ ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.