ಮಡಿಕೇರಿ, ನ. ೧೪: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಡಿಕೇರಿ ವಕೀಲರ ಸಂಘ, ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರೊö್ಯÃತ್ಸವ ಅಮೃತ ಮಹೋತ್ಸವ ಅಂಗವಾಗಿ ಕಾನೂನು ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿನರಾಳ್ಕರ್ ಭೀಮರಾವ್ ಲಗಮಪ್ಪ ಅವರು ಜಾಥಾಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ವಿನಯತೆ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಬೇಕೆಂದು ಕರೆ ನೀಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಕೆ.ಡಿ. ದಯಾನಂದ, ಪ್ರತಿಯೊಬ್ಬರು ಕಾನೂನಿನ ಬಗ್ಗೆ ತಿಳಿದುಕೊಂಡು ಉತ್ತಮ ಪ್ರಜೆಗಳಾಗಿ ಬದುಕಬೇಕೆಂದು ಸಲಹೆಯಿತ್ತರು.
ಮುಖ್ಯ ಅತಿಥಿಗಳಾಗಿದ್ದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣ್ಯ ಅವರು ಮಾತನಾಡಿ, ಮಕ್ಕಳ ಹಕ್ಕುಗಳು ಬಾಲ್ಯವಿವಾಹ, ಬಾಲಕಾರ್ಮಿಕರ ಕಾನೂನುಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
ನಗರ ಠಾಣಾ ವೃತ್ತ ನಿರೀಕ್ಷಕ ವೆಂಕಟೇಶ್, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಪ್ರತಿಯೊಬ್ಬರು ಪೊಲೀಸ್ ಇಲಾಖೆ ಯೊಂದಿಗೆ ಕೈಜೋಡಿಸಬೇಕೆಂದರು.
ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಂಜಿತ್ ಮಾತನಾಡಿ, ವಿದ್ಯಾರ್ಥಿಗಳು ಸ್ಕೌಟ್ ಮತ್ತು ಗೈಡ್ಸ್ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ವೇದಿಕೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀರಾದ ಬಿ.ಕೆ. ಮನು, ನಗರ ಠಾಣಾಧಿಕಾರಿ ಅಂತಿಮ, ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ದಮಯಂತಿ ಮತ್ತಿತರರಿದ್ದರು.
ಕಾನೂನು ಸೇವಾ ಪ್ರಾಧಿಕಾರದ ಪ್ರದೀಪ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಕೀಲರ ಸಂಘದ ನಿರ್ದೇಶಕ ಡಿ.ಕೆ. ರಾಜೇಶ್ ವಂದಿಸಿದರು.