ಮಡಿಕೇರಿ, ನ. ೧೪: ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಯುನೈಟೆಡ್ ಕೊಡವ ಆರ್ಗನೈಜೇಷನ್ ವತಿಯಿಂದ ಸಂಸದ ಪ್ರತಾಪ್ ಸಿಂಹ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಯುಕೋ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ ಸಂಸದರನ್ನು ಭೇಟಿ ಮಾಡಿದ ನಿಯೋಗ ಸರಕಾರದಿಂದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಆಗಬೇಕಾದ ಸಂಬAಧ ಚರ್ಚಿಸಿತು. ಅಲ್ಲದೆ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಅಗತ್ಯತೆಯ ಕುರಿತು ಸಂಸದರ ಗಮನ ಸೆಳೆಯಿತು.
ಮನವಿ ಸ್ವೀಕರಿಸಿದ ಪ್ರತಾಪ್ ಸಿಂಹ, ಈ ನಿಟ್ಟಿನಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಂಜು ಚಿಣ್ಣಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.