ಸೋಮವಾರಪೇಟೆ, ನ. ೧೪: ಇಲ್ಲಿನ ರೋಟರಿ ಸಂಸ್ಥೆಗೆ ತಾ. ೧೬ ರಂದು ಜಿಲ್ಲಾ ಗವರ್ನರ್ ಎ.ಆರ್. ರವೀಂದ್ರ ಭಟ್ ಭೇಟಿ ನೀಡಲಿದ್ದಾರೆ.
ಅಂದು ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಭೆಯ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಎಂ.ಎA. ಪ್ರಕಾಶ್‌ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಲಯ ೧೪ರ ಸಹಾಯಕ ರಾಜ್ಯಪಾಲ ಎಚ್.ಟಿ. ಅನಿಲ್, ಕಾರ್ಯದರ್ಶಿ ಹೆಚ್.ಎಸ್. ವಸಂತ್‌ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ.ಪಿ. ಧರ್ಮಪ್ಪ ತಿಳಿಸಿದ್ದಾರೆ.