ಮಡಿಕೇರಿ, ನ. ೧೪: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ೩೧ ನೇ ವರ್ಷದ 'ಕೊಡವ ನ್ಯಾಷನಲ್ ಡೇ' ಆಚರಣೆ ತಾ.೨೬ ರಂದು ನಡೆಯಲಿದೆ. ಅಂದು ಬೆಳಿಗ್ಗೆ ೧೦:೩೦ ಗಂಟೆಗೆ ನಗರದ ಹೊರವಲಯದ ಕ್ಯಾಪಿಟಲ್ ವಿಲೇಜ್ ರೆಸಾರ್ಟ್ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನಮಾನ ದೊರಕಬೇಕು, ಕೊಡವ ಭಾಷೆಯನ್ನು ಸಂವಿಧಾನದ ೮ ನೇ ಪರಿಚ್ಚೇದಕ್ಕೆ ಸೇರಿಸಬೇಕು, ಹಾಗೂ ಇತರ ವಿವಿಧ ಬೇಡಿಕೆಗಳ ಈಡೇರಿಕೆಗೆ ನಿರ್ಣಯಗಳನ್ನು ಕೈಗೊಳ್ಳಲಾಗುವು ದಾಗಿ ಸಂಘಟನೆಯ ಅಧ್ಯಕ್ಷ ನಂದಿನೆರವAಡ ಯು. ನಾಚಪ್ಪ ಅವರು ತಿಳಿಸಿದ್ದಾರೆ.