ಮುಳ್ಳೂರು: ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೧೩೨ನೇ ಮಕ್ಕಳ ದಿನಾಚರಣೆಯನ್ನು ಶಾಲಾ ಮಕ್ಕಳು ಸಡಗರ ಸಂಭ್ರಮದಿAದ ಆಚರಿಸಿದರು. ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ೪ನೇ ತರಗತಿ ವಿದ್ಯಾರ್ಥಿನಿ ಪುಣ್ಯ ಅವರು ಅಧ್ಯಕ್ಷತೆ ವಹಿಸಿಕೊಂಡು ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳಾದ ತನ್ವಿ, ಸಮೃದ್ಧ್, ಹಂಸರಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿನದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಭಾಷಣದಲ್ಲಿ ಪಂಡಿತ್ ಜವಾಹರ್‌ಲಾಲ್ ನೆಹರುರವರ ಬಾಲ್ಯದ ದಿನಗಳು, ಅವರ ವಿದ್ಯಾಭ್ಯಾಸ, ಸ್ವಾಂತAತ್ರö್ಯ ಹೋರಾಟ ಸ್ವಾತಂತ್ರö್ಯದ ನಂತರ ರಾಷ್ಟçದ ಪ್ರಧಾನ ಮಂತ್ರಿಯಾಗಿ ಅತ್ಯುತ್ತಮ ಆಡಳಿತ ನಡೆಸಿರುವ ಬಗ್ಗೆ ಮೊದಲಾಗಿ ಅವರ ಜೀವನ ಚರಿತ್ರೆಯನ್ನು ಕಾರ್ಯಕ್ರಮದಲ್ಲಿ ವಿವರಿಸಿದರು.
ಶಾಲೆಯ ಸಹ ಶಿಕ್ಷಕ ಸಿ.ಎಸ್. ಸತೀಶ್ ಅವರು ಭಾನುವಾರ ಶಾಲೆಗೆ ರಜೆ ಇದ್ದರೂ ಸಹ ಎಂದಿನAತೆ ಶಾಲೆಗೆ ಬಂದು ತಮ್ಮ ಶಾಲೆಯ ಮಕ್ಕಳು ನಡೆಸಿಕೊಟ್ಟ ಮಕ್ಕಳ ದಿನಾಚರಣೆಯನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಮನೋರಂಜನಾತ್ಮಕ ಆಟವನ್ನು ಆಡುವುದರ ಮೂಲಕ ಮಕ್ಕಳ ದಿನಾಚರಣೆಯನ್ನು ಮಕ್ಕಳ ಹಬ್ಬವನ್ನಾಗಿ ವಿನೂತನವಾಗಿ ಆಚರಿಸಿದರು. ಪೊನ್ನಂಪೇಟೆ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಮಕ್ಕಳ ದಿನಾಚರಣೆಯು ವಿದ್ಯಾರ್ಥಿನಿ ಕೆ.ಆರ್. ದೇಚಮ್ಮ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ವಿದ್ಯಾರ್ಥಿಗಳಾದ ಕೆ.ಎಂ. ಸನುಷ್ಮ, ಪಿ.ಜಿ. ಕೌಶಿಕ ಭಾಗವಹಿಸಿದ್ದರು. ಅಮೂಲ್ಯ, ಪ್ರಾರ್ಥನ, ವೇದಾಂತ ಮಕ್ಕಳ ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು.
ವಿದ್ಯಾರ್ಥಿಗಳು ಮಕ್ಕಳ ಗೀತೆ ಗಾಯನ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯ ವಿಜೇತರಿಗೆ ಎಸ್ ಡಿ ಎಂ ಸಿ ಅಧ್ಯಕ್ಷ ರಘುನಾಥ್ ಬಹುಮಾನ ವಿತರಿಸಿದರು. ಈ ಸಂದರ್ಭ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಾಡ ಜೀವನ್, ಮುಖ್ಯಶಿಕ್ಷಕ ಬಿ.ಎಂ.ವಿಜಯ್, ಶಿಕ್ಷಕರಾದ ಮಹೇಶ್, ಮಂಗಳಾಗಿ, ಫಿಲೋಮಿನಾ, ರೋಸಿ, ಶಕೀಲಾ ಬಾನು, ಗಂಗಾಮಣಿ, ಗಂಗಮ್ಮ, ಜಾನ್ಸಿ, ವಿನಿತಾ, ನಿಂಗರಾಜು, ಎಸ್ ಡಿ ಎಂ ಸಿ ಸದಸ್ಯ ಮುರುಳಿ ಗಣೇಶ್ ಹಾಜರಿದ್ದರು. ವಿದ್ಯಾರ್ಥಿ ಘನಶಾಂ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ಪೊನ್ನಂಪೇಟೆ: ಪೊನ್ನಂಪೇಟೆ ತಾಲೂಕಿನ ಮತ್ತೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ಬಿ.ಎ. ಇಂದಿರಾ ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಶಿಕ್ಷಕಿ ಸುಮ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.
ಪೊನ್ನಂಪೇಟೆ: ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಕ್ಕಳ ದಿನ ಆಚರಿಸಲಾಯಿತು. ಮುಖ್ಯ ಶಿಕ್ಷಕ ವಾಸು ವರ್ಮಾ ಹಾಗೂ ಸಹ ಶಿಕ್ಷಕರು ಹಾಜರಿದ್ದರು. ಮಕ್ಕಳಿಗೆ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.
ಶನಿವಾರಸಂತೆ: ಪಟ್ಟಣದ ಸುಪ್ರಜಾ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಬಿ.ಜಿ. ಪೂರ್ವಿ ಹಾಗೂ ಕೀರ್ತನ್ ಜಿ. ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ಬಿ.ಟಿ. ಚೈತನ್ಯ, ಕೀರ್ತನಾ, ಕೆ.ಎಸ್. ಗೀತಾ, ಸುಹಾನಿ ಆರಾಧ್ಯ ಹಾಗೂ ಎಲ್.ಎಲ್. ಜೀವಿತಾ ಮಾತನಾಡಿ, ದಿನದ ಮಹತ್ವ ಹಾಗೂ ನೆಹರೂರವರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ಪ್ರಾಂಶುಪಾಲೆ ಡಿ. ಸುಜಲಾದೇವಿ, ಶಿಕ್ಷಕರು, ಸಮಿತಿ ಕಾರ್ಯದರ್ಶಿ ಗುರುಪ್ರಸಾದ್ ಹಾಜರಿದ್ದರು.