ಮಡಿಕೇರಿ, ನ. ೧೪: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ಸಮಷ್ಟಿ” ಕನ್ನಡ ಕಲೆಗಳ ವೃಷ್ಟಿ ಕಾರ್ಯ ಕ್ರಮವನ್ನು ಆಯೋಜಿಸ ಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ವಿ.ವಿ. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಸನ್ಮಾನ ಸ್ವೀಕರಿಸಿ ಮಾತನಾಡಿ ಬಾರಿಸು ಕನ್ನಡ ಡಿಂಡಿಮವ ಎಂಬ ಪದ್ಯದ ಅರ್ಥವನ್ನು ಅರಿತುಕೊಂಡರೆ ನಾವು ಧನ್ಯರಾಗುತ್ತೇವೆ. ಕೇವಲ ನವೆಂಬರ್ ಕನ್ನಡಿಗರಾಗದೆ ಎಲ್ಲಾ ದಿನವು ನಮ್ಮ ಭಾಷೆಯ ಬಗ್ಗೆ ನಮ್ಮ ಜನರ ಹಾಗೂ ಸಂಸ್ಕೃತಿಯ ಬಗ್ಗೆ ಅಭಿಮಾನ ಇರಬೇಕೆಂದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ನಂಜುAಡೇಗೌಡ ಮಾತನಾಡಿ, ನಮ್ಮ ಭಾಷೆಯನ್ನು ಬೆಳೆಸಬೇಕಾದ ಕರ್ತವ್ಯವನ್ನು ನಿರ್ವಹಿಸುವುದು ರಾಜ್ಯೋತ್ಸವಕ್ಕೆ ಶೋಭೆ ತಂದAತೆ ಎಂದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಮಂಜುನಾಥ ಎಸ್. ಮಾತನಾಡಿ ಕನ್ನಡ ರಾಜ್ಯೋತ್ಸವ ನಮ್ಮ ನಾಡಹಬ್ಬವಾಗಿದ್ದು ಉತ್ಸವದಂತೆ ಆಚರಿಸಲ್ಪಡಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ. ವಿಶಾಲ್ ಕುಮಾರ್ ಮಾತನಾಡಿ, ಯುವಜನತೆ ಕನ್ನಡದ ಉಳಿವಿಗಾಗಿ ನಿಲ್ಲಬೇಕು ಶ್ರಮಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವದ “ಸಮಷ್ಟಿ” ಕನ್ನಡ ಕಲೆಗಳ ವೃಷ್ಟಿ ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನಲ್ಲಿ ಕವನ ಸ್ಪರ್ಧೆ, ಲೇಖನ ಸ್ಪರ್ಧೆ, ಬುಗುರಿ, ಗಿಲ್ಲಿದಾಂಡು, ಹಗ್ಗ ಜಗ್ಗಾಟ, ಚೌಕಬಾರ ಮುಂತಾದ ಆಟಗಳನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಎಂಬಿಬಿಎಸ್, ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗÀಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ಕಿರ್ತನ ಮತ್ತು ಅಭಿಲಾಶ್ ನಿರೂಪಿಸಿದರು. ರಾಘವೇಂದ್ರ ಸ್ವಾಗತಿಸಿ, ಸುಷ್ಮಿತ ವಂದಿಸಿದರು.