ಕೂಡಿಗೆ, ನ. ೧೪ ಕೂಡಿಗೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಆವರಣದಲ್ಲಿ ಅಧ್ಯಕ್ಷೆ ಭಾರತಿ ಕೃಷ್ಣ ಅಧ್ಯಕ್ಷತೆಯಲ್ಲಿ ನಡೆಯಿತು.
ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ಮಾತನಾಡಿ, ಸಂಘಕ್ಕೆ ಜಾಗವನ್ನು ಗುರುತಿಸಿದಲ್ಲಿ ಒಕ್ಕೂಟದ ವತಿಯಿಂದ ಕಟ್ಟಡದ ನಿರ್ಮಾಣಕ್ಕೆ ೭.೫೦ ಲಕ್ಷ ಅನುದಾನವನ್ನು ನೀಡಲಾಗುವುದು. ಅಲ್ಲದೆ ಹಸುಗಳಿಗೆ ಬೇಕಾಗುವಷ್ಟು ಉತ್ತಮ ಗುಣಮಟ್ಟದ ಪಶು ಆಹಾರವನ್ನು ಜಿಲ್ಲೆಯ ಎಲ್ಲಾ ಹಾಲು ಉತ್ಪಾದಕರ ಸಂಘಗಳಿಗೆ ಸರಬರಾಜು ಮಾಡಲಾಗುತ್ತಿದೆ. ರೈತರು ಉತ್ತಮ ಗುಣಮಟ್ಟದ ಹಾಲನ್ನು ಸಂಘಕ್ಕೆ ಪೂರೈಸುವುದರ ಮೂಲಕ ಸಂಘದ ಬೆಳವಣಿಗೆಗೆ ಸಹಕಾರ ನೀಡಬೇಕೆಂದು ತಿಳಿಸಿದರು.
ಈ ಸಂದರ್ಭ ಹಾಸನ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಬಿ.ವಿ. ವೀಣಾ ಮಾತನಾಡಿ, ಒಕ್ಕೂಟದ ವತಿಯಿಂದ ದೊರೆಯುವ ಸೌಲಭ್ಯ ಮತ್ತು ಹಸುಗಳಿಗೆ ಉಚಿತ ತಪಾಸಣೆ ಸೇರಿದಂತೆ ಒಕ್ಕೂಟದ ಯೋಜನೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಗುರುತಿಸಿ ಬಹುಮಾನ ನೀಡಲಾಯಿತು. ಸಭೆಯಲ್ಲಿ ಲೆಕ್ಕ ಪತ್ರ ಮಂಡನೆ, ವಾರ್ಷಿಕ ವರದಿಯ ಮಂಡನೆಯನ್ನು ಕಾರ್ಯದರ್ಶಿ ಸಿ. ಲಕ್ಷಿö್ಮ ಮಾಡಿದರು.
ಸಭೆಯಲ್ಲಿ ಉಪಾಧ್ಯಕ್ಷೆ ವೀಣಾ, ನಿರ್ದೇಶಕರಾದ ಚಂದ್ರಕಾAತಿ, ಚೈತ್ರಾ, ಶಾರದಾ, ರಾಣಿ, ಪ್ರಮೀಳಾ, ರಾಧ, ಸಾಕಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.