ಮಡಿಕೇರಿ, ನ. ೧೫: ಜಿಲ್ಲೆಯಲ್ಲಿ ನಿರಂತರವಾಗಿ ಪೊಲೀಸ್ ಇಲಾಖೆ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಧೋರಣೆ ನಡೆಸಿಕೊಂಡು ಬರುತ್ತಿದ್ದು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರಸಂತೆ ನಿವಾಸಿ, ಜಾಕಿರ್ ಪಾಷರವರು ತನ್ನ ಪತ್ನಿ, ಮಕ್ಕಳೊಂದಿಗೆ ಕಾರಿನಲ್ಲಿ ತನ್ನ ವೈಯಕ್ತಿಕ ಕಾರ್ಯದ ನಿಮಿತ್ತ ಮೈಸೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎರಡು ಬೈಕ್ಗಳಲ್ಲಿ ಬಂದ ನಾಲ್ವರು ಸಂಘಪರಿವಾರದವರು ಕಾರಿಗೆ ಅಡ್ಡ ಬಂದು ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ್ದಾರೆ. ಈ ಸಂಬAಧ ದೂರು ದಾಖಲು ಮಾಡಲು ಹೋದಂತಹ ಸಂದರ್ಭದಲ್ಲಿ ಅಮಾಯಕರ ವಿರುದ್ಧವೇ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿದ್ದಾರೆ. ಇದು ಖಂಡನೀಯ. ತಪ್ಪಿತಸ್ಥರನ್ನು ಶನಿವಾರದೊಳಗೆ ಬಂಧಿಸದಿದ್ದಲ್ಲಿ ಸೋಮವಾರ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಪ್ರಕರಣಕ್ಕೆ ಸಂಬAಧಪಟ್ಟAತೆ ಶನಿವಾರಸಂತೆ ಠಾಣೆಯ ಮುಂಭಾಗ ಮಹಿಳಾ ಸಂಘದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ರವರ ಪರ ಘೋಷಣೆ ಕೂಗಿದ್ದಾರೆ. ಇದನ್ನು ವೀಡಿಯೋ ಮಾಡಿದ ಸಂಘಪರಿವಾರ ಕಾರ್ಯಕರ್ತರು ಎಡಿಟ್ ಮಾಡಿ ಪಾಕಿಸ್ತಾನ್ ಝಿಂದಾಬಾದ್ ಎಂದು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ್ಟಿದ್ದಾರೆ. ಈ ಸಂಬAಧ ಸಂಘಪರಿವಾರದ ಕಾರ್ಯಕರ್ತನೋರ್ವನ ವಿರುದ್ಧ ಕುಶಾಲನಗರ ಮುಸ್ಲಿಂ ಒಕ್ಕೂಟದ ಸದಸ್ಯರು ಪ್ರಕರಣ ದಾಖಲಿಸಿದ್ದಾರೆ. ಆದರೆ ಎಫ್ಐಆರ್ ಮಾಡದೆ ಕೇವಲ ಸ್ವೀಕೃತಿ ಪತ್ರ ನೀಡಿರುವುದು ವಿಪರ್ಯಾಸವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಜಿಲ್ಲಾ ಸಮಿತಿ ಸದಸ್ಯ ಮನ್ಸೂರು ಆಲಿ ಮಾತನಾಡಿ, ಇತ್ತೀಚಿನ ಹಲವಾರು ಪ್ರಕರಣದಲ್ಲಿ ಮುಸ್ಲಿಂಮರು ಆರೋಪಿಗಳಾದರೆ ಹಲವಾರು ಸೆಕ್ಷನ್ ಹಾಕಿ ಪ್ರಕರಣ ದಾಖಲಿಸಲಾಗುತ್ತದೆ. ಅದೇ ವೇಳೆ ಸಂಘಪರಿವಾರದ ಕಾರ್ಯಕರ್ತರು ಆರೋಪಿಗಳಾದರೆ ಪ್ರಕರಣ ದಾಖಲಿಸಲು ಮೀನಾಮೇಶ ಎಣಿಸಲಾಗುತ್ತದೆ. ಒಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ನ್ಯಾಯದಲ್ಲಿ ತಾರತಮ್ಯ ನಡೆಸುತ್ತಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ದೂರಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ, ಪ್ರಮುಖರಾದ ಮೇರಿ ವೇಗಸ್, ಕೆ.ಎ.ಉಸ್ಮಾನ್ ಇದ್ದರು.