ನಾಪೋಕ್ಲು, ನ. ೧೫: ಕಕ್ಕಬ್ಬೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಎಂಎಲ್ಸಿ ವೀಣಾ ಅಚ್ಚಯ್ಯ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡ ಕುಡಿಯರ ಮುತ್ತಪ್ಪ, ಕಕ್ಕಬ್ಬೆ ಗ್ರಾಮ ಪಂಚಾಯಿತಿ ಸದಸ್ಯ ಕುಡಿಯರ ಭರತ್ ಚಂದ್ರ, ಮತ್ತಿತರರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಬಡಕಡ ದೀನಾ ಪೂವಯ್ಯ, ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಮುಖಂಡರಾದ ಬಾಚಮಂಡ ರಾಜಾ ಪೂವಣ್ಣ, ಬಾಚಮಂಡ ಲವ ಚಿಣ್ಣಪ್ಪ, ಮಹಮ್ಮದ್ ಹಾಜಿ, ಉಸ್ಮಾನ್, ಮತ್ತಿತರರು ಇದ್ದರು.