*ಗೋಣಿಕೊಪ್ಪ, ನ. ೧೫: ‘ಆಜಾದಿ ಕಾ ಅಮೃತಮಹೋತ್ಸವ' ಮತ್ತು ಮಕ್ಕಳ ದಿನಾಚರಣೆಯ ಅಂಗವಾಗಿ ವೀರಾಜಪೇಟೆ ಪಟ್ಟಣದಲ್ಲಿ ಕಾನೂನು ಅರಿವು ಪ್ರಸರಣ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸಂತ ಅನ್ನಮ್ಮ ಶಾಲೆ, ವೀರಾಜಪೇಟೆ ಇವರ ಸಹಭಾಗಿತ್ವದಲ್ಲಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು.
ವೀರಾಜಪೇಟೆ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಜಿ ಲೋಕೇಶ್ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ದೇಶದ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ಸಾಮಾನ್ಯ ಜ್ಞಾನ ವಿಷಯ ಮತ್ತು ಪ್ರಚಲಿತ ವಿದ್ಯಾಮಾನಗಳನ್ನು ಕಲಿಯುವುದರೊಂದಿಗೆ ಪ್ರಾಮಾಣಿಕತೆಯ ಮೂಲಕ ಸತ್ಯದ ದಾರಿಯಲ್ಲಿ ನಡೆದು ಜೀವನದಲ್ಲಿ ಯಶಸ್ಸನ್ನು ಕಂಡುಕೊAಡು ಉನ್ನತ ಅಧಿಕಾರಿಗಳಾಗಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಸತ್ಪçಜೆಗಳಾಗಬೇಕೆಂದು ಸಲಹೆ ನೀಡಿದರು.
ತಾಲೂಕು ದಂಡಾಧಿಕಾರಿ ಯೋಗಾನಂದ ಅವರು ವಿದ್ಯಾರ್ಥಿಗಳು ತಮ್ಮಲ್ಲಿ ಉನ್ನತ ಆದರ್ಶಗಳನ್ನು ಬೆಳೆಸಿಕೊಂಡು ಭವಿಷ್ಯದ ಗುರಿಯತ್ತ ಸಾಗಬೇಕು ಎಂದು ಮಾರ್ಗದರ್ಶನ ಮಾಡಿದರು.
ವೀರಾಜಪೇಟೆ ಸಂತ ಅನ್ನಮ್ಮ ಶಾಲೆಯ ಧರ್ಮಗುರುಗಳಾದ ಫಾದರ್ ಮದುಲೈ ಮುತ್ತು ಅವರ ಅಧ್ಯಕ್ಷತೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಕೊನಪ್ಪ, ಅಪರ ಸಿವಿಲ್ ನ್ಯಾಯಾಧೀಶರಾದ ಮಹಾಲಕ್ಷ್ಮಿ, ವೀರಾಜಪೇಟೆ ಉಪ ನಿರೀಕ್ಷಕ ಜಗದೀಶ್ ಧೂಳ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ತಾಲೂಕಿನ ಕ್ಷೇತ್ರ ಸಂಪನ್ಮೂಲ ಸಮನ್ವಯಾದಿ ವನಜಾಕ್ಷಿ ಪಾಲ್ಗೊಂಡಿದ್ದರು.
ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲಾ ಹಂತದಲ್ಲಿ ನಡೆಸಿದ ಸ್ಪರ್ಧೆಗಳ ಬಹುಮಾನವನ್ನು ಈ ಸಂದರ್ಭ ವಿತರಿಸಲಾಯಿತು. ತನ್ನ ಪ್ರಾಣದ ಹಂಗನ್ನು ತೊರೆದು ನೀರಿನಲ್ಲಿ ಬಿದ್ದ ವಯೋವೃದ್ಧನ ಜೀವವನ್ನು ರಕ್ಷಿಸಿದ ಸರ್ವದೈವತಾ ಕಾಲೇಜಿನ ವಿದ್ಯಾರ್ಥಿನಿ ನಮ್ರತಾಳನ್ನು ಸನ್ಮಾನಿಸಲಾಯಿತು.