ಮಡಿಕೇರಿ, ನ. ೧೬: ೧೮ ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅಗತ್ಯ ಕ್ರಮವಹಿಸುವಂತೆ ಸಂಬAಧಪಟ್ಟ ಕಾಲೇಜುಗಳ ಪ್ರಾಂಶುಪಾಲರಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಮನವಿ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ೧೮-೧೯ ವರ್ಷದ ಯೋಜಿತ ಗಣತಿ ಪ್ರಕಾರ ೧೬,೬೭೪ ಇದ್ದು, ಇಲ್ಲಿಯವರೆಗೆ (೨೦೨೧ರ ನವೆಂಬರ್, ೦೮ರ ಕರಡು ಮತದಾರರ ಪಟ್ಟಿಯಂತೆ) ಕೇವಲ ೫,೮೪೧ ಮಾತ್ರ ೧೮-೧೯ ವರ್ಷದ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿದ್ದಾರೆ. ಆದ್ದರಿಂದ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವಂತಾಗಲು ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಶ್ರಮಿಸುವಂತೆ ಕೋರಿದರು.
ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲು ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿಯನ್ನು ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ (ಗಿಔಖಿಇಖ ಊಇಐPಐIಓಇ ಂPP) ಅನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಮತದಾರರು / ನಾಗರಿಕರು ತಮ್ಮ ಮೊಬೈಲ್ನಲ್ಲಿ ಮತದಾರರ ಸಹಾಯವಾಣಿ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು ಮತ್ತು ಮತದಾರರ ಸಹಾಯವಾಣಿ ಆಪ್ (ಗಿಔಖಿಇಖ ಊಇಐPಐIಓಇ ಂPP)ನಲ್ಲಿ ಹಾಗೂ ತಿತಿತಿ.ಟಿvsಠಿ.ಟಿiಛಿ.iಟಿ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ನಮೂನೆ ೬, ೬ಎ, ೭, ೮ ಮತ್ತು ೮ಎನ್ನು ಸಲ್ಲಿಸಬಹುದಾಗಿದೆ ಎಂದು ರಾಜು ಮೊಗವೀರ ಅವರು ಹೇಳಿದರು. ವಿವಿಧ ಕಾಲೇಜಿನ ಪ್ರಾಂಶುಪಾಲರು, ಇತರರು ಇದ್ದರು.