ಸೋಮವಾರಪೇಟೆ,ನ.೧೫: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಯುವಕ ಸಂಘ ಹಾರಳ್ಳಿ ಬೀಟಿಕಟ್ಟೆ ಇವರ ವತಿಯಿಂದ ಕಾರ್ಮಿಕರ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಕೆ.ಜಿ.ದಿನೇಶ್ ಉದ್ಘಾಟಿಸಿದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಶಿಕ್ಷಕ ಕೆ.ಪಿ.ಜಯಕುಮಾರ್ ಮಾತನಾಡಿ, ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ವೈಚಾರಿಕ ಕ್ರಾಂತಿ ಹಾಗೂ ಅನ್ಯಾಯ, ಅಸಮಾನತೆ ಮತ್ತು ಶೋಷಣೆಗಳ ವಿರುದ್ಧದ ಹೋರಾಟ ಎಂದೆAದಿಗೂ ಈ ದೇಶವು ಮರೆಯುವಂತಿಲ್ಲ. ಅವರ ಕಠಿಣ ಪರಿಶ್ರಮ, ಸಾಧನೆ, ತತ್ವಾದರ್ಶ ಇಂದಿನ ನಮಗೆಲ್ಲರಿಗೂ ಪ್ರೇರಣೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಡಾ.ಅಂಬೇಡ್ಕರ್ ಯುವಕ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್.ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಹಿರಿಕರ ಮಲ್ಲೇಶ್ವರ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಪಿ.ಸುರೇಶ್, ಚನ್ನಾಪುರ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಸಿ.ಎಸ್.ಅಶ್ವಥ್, ಹಾರಳ್ಳಿ ಚನ್ನಕೇಶವ ದೇವಾಲಯ ಸಮಿತಿ ಅಧ್ಯಕ್ಷ ಎಚ್.ಎಂ.ಉತ್ತಯ್ಯ, ಪ್ರಮುಖರಾದ ಟಿ.ಆರ್.ರಾಮಚಂದ್ರ, ಸಿ.ಈ.ವೆಂಕಟೇಶ್ ಉಪಸ್ಥಿತರಿದ್ದರು.