ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ‘ಕರ್ನಾಟಕ ರತ್ನ' ಘೋಷಣೆ

ಬೆಂಗಳೂರು, ನ. ೧೬: ಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಪುನೀತ ನಮನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಪುನೀತ್‌ಗೆ ಮರಣೋತ್ತರ ಕರ್ನಾಟಕ ರತ್ನ ಘೋಷಿಸಿ, ರಾಜಕುಮಾರ್‌ರಂತೆ ಪುನೀತ್‌ಗೂ ಸ್ಮಾರಕ ನಿರ್ಮಿಸುವುದಾಗಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಘೋಷಿಸಿದರು. ಪುನೀತ್ ಅತ್ಯುತ್ತಮ ಚಾರಿತ್ರ‍್ಯದ ಕಾರಣ ಇತಿಹಾಸದ ಪುಟಗಳಲ್ಲಿ ಸೇರಿದ್ದಾರೆ. ಅವರಂತೆ ವಿನಯ, ವಿಧೇಯತೆಯನ್ನು ರೂಢಿಸಿಕೊಂಡವರು ಕಡಿಮೆ ಎಂದರು. ಕೇವಲ ಕರ್ನಾಟಕ ರತ್ನ ಮಾತ್ರವಲ್ಲದೆ ರಾಷ್ಟçಮಟ್ಟದ ಪ್ರಶಸ್ತಿಗಳಿಗೂ ಅಪ್ಪು ಭಾಜನರಾಗುವ ಬಗ್ಗೆ ಚಿಂತನೆ ನಡೆಸಲಾಗುವುದು. ಡಾ. ರಾಜ್ ಕುಮಾರ್ ಸ್ಮಾರಕದಂತೆ ಪುನೀತ್ ಸ್ಮಾರಕವನ್ನೂ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಪುನೀತ ನಮನ ಕಾರ್ಯಕ್ರಮದಲ್ಲಿ ‘ದೀಪ ನಮನ’ ಹಾಗೂ ಪುಷ್ಪಾರ್ಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಸಚಿವರು, ಶಾಸಕರು ಸೇರಿದಂತೆ ಗಣ್ಯಾತಿಗಣ್ಯರು ಮೇಣದ ಬತ್ತಿ ಬೆಳಗಿ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಚಿತ್ರ ಸಾಹಿತಿ ಡಾ. ನಾಗೇಂದ್ರ ಪ್ರಸಾದ್ ರಚನೆಯ ‘ಮುತ್ತುರಾಜ ಹೆತ್ತ ಮುತ್ತೇ ಎತ್ತ ಹೋದೆಯೋ’ ಎಂಬ ಹೃದಯ ತಟ್ಟುವ ಗೀತೆ ಹಿನ್ನೆಲೆಯಲ್ಲಿ ಮೂಡಿಬಂದಾಗ ನಟ ಶಿವರಾಜ್ ಕುಮಾರ್ ಅಗಲಿದ ಸೋದರನನ್ನು ನೆನೆದು ಕಣ್ಣೀರಾದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಡಳಿತ ಪಕ್ಷದ ಸಚಿವರುಗಳು ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಿದರು. ನಟ ವಿಶಾಲ್ ಸೇರಿದಂತೆ ದಕ್ಷಿಣ ಚಿತ್ರರಂಗದ ಕಲಾವಿದರು ಪುನೀತ ನಮನದಲ್ಲಿ ಪಾಲ್ಗೊಂಡರು. ದಿಢೀರನೆ ಕಣ್ಮರೆಯಾದ ಚಂದನವನದ ನಕ್ಷತ್ರ ಅಪ್ಪು ಸ್ಮರಣೆಗಾಗಿ ಹಮ್ಮಿಕೊಂಡಿದ್ದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ, ಅವರ ಅಭಿನಯದ ಚಿತ್ರಗಳ ಮಾಹಿತಿ, ಸಮಾಜ ಮುಖಿ ಚಟುವಟಿಕೆ, ಸಹಾಯದ ಬಗ್ಗೆ ಕಿರುಚಿತ್ರವೊಂದನ್ನು ಪ್ರದರ್ಶಿಸಲಾಯಿತು.

ಪೂರ್ವಾಂಚಲ ಎಕ್ಸ್ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ಮೋದಿ

ಸುಲ್ತಾನ್‌ಪುರ, ನ. ೧೬: ಪ್ರಧಾನಿ ನರೇಂದ್ರ ಮೋದಿ ಪೂರ್ವಾಂಚಲ ಎಕ್ಸ್ಪ್ರೆಸ್‌ವೇನ್ನು ಉದ್ಘಾಟಿಸಿದ್ದು, ಚುನಾವಣೆಯ ಹಿನ್ನೆಲೆ ವಿಪಕ್ಷಗಳ ವಿರುದ್ಧ ತೀಕ್ಷ÷್ಣ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ರಾಜ್ಯದ ಪ್ರಮುಖ ಪೂರ್ವ ಭಾಗವನ್ನು ಮಾಫಿಯಾವಾಡ್ ಹಾಗೂ ಬಡತನಕ್ಕೆ ಇಳಿಕೆ ಮಾಡಿತ್ತು. ಆದರೆ ಈಗ ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ. ಐಎಎಫ್ ಸಿ-೧೩೦ ಹರ್ಕ್ಯುಲಸ್ ವಿಮಾನದಲ್ಲಿ ಹೆದ್ದಾರಿ ಏರ್‌ಸ್ಟಿçಪ್‌ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯನ್ನು ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಸಿಎಂ ಯೋಗಿ ಆದಿತ್ಯನಾಥ್ ಅವರು ಸ್ವಾಗತಿಸಿದರು. ಈ ಬಳಿಕ ಮೋದಿ ೩೪೧ ಕಿ.ಮೀ. ಪೂರ್ವಾಂಚಲ ಎಕ್ಸ್ಪ್ರೆಸ್ ವೇನ್ನು ಉದ್ಘಾಟಿಸಿದ್ದಾರೆ. ಉದ್ಘಾಟನೆ ಬಳಿಕ ಸುಲ್ತಾನ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ಈ ಹಿಂದಿನ ಮುಖ್ಯಮಂತ್ರಿಗಳ ಆಡಳಿತಾ ವಧಿಯಲ್ಲಿ ಅಭಿವೃದ್ಧಿ ಎನ್ನುವುದು ಅವರ ಮನೆ, ಆಸ್ತಿಗಳಿರುವ ಪ್ರದೇಶಗಳಿಗೆ ಸೀಮಿತವಾಗಿತ್ತು. ಆದರೆ ಈಗಿನ ಆಡಳಿತದಲ್ಲಿ ಪಶ್ಚಿಮ ಉತ್ತರ ಪ್ರದೇಶಕ್ಕೆ ಸಿಗುತ್ತಿದ್ದ ಅಭಿವೃದ್ಧಿಯ ಫಲಗಳು ಪೂರ್ವ ಉತ್ತರ ಪ್ರದೇಶಕ್ಕೂ ಸಿಗುತ್ತಿದೆ ಎಂದು ಹೇಳಿದ್ದಾರೆ. ಷಟ್ಪಥ ಎಕ್ಸ್ಪ್ರೆಸ್‌ವೇ ಪೂರ್ವ ಉತ್ತರ ಪ್ರದೇಶ ಭಾಗಕ್ಕೆ ಜೀವನಾಡಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದು ಈ ಭಾಗದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ. ೩.೨ ಕಿ.ಮೀ. ಏರ್‌ಸ್ಟಿçಪ್‌ನ್ನು ಫೈಟರ್ ಯುದ್ಧ ವಿಮಾನಗಳ ತುರ್ತು ಭೂಸ್ಪರ್ಶಕ್ಕೆ ಅನುಕೂಲವಾಗುವಂತೆ ನಿರ್ಮಾಣ ಮಾಡಲಾಗಿದೆ. ೩೪೧ ಕಿ.ಮೀ. ಎಕ್ಸ್ಪ್ರೆಸ್ ವೇ ರಾಜ್ಯ ರಾಜಧಾನಿ ಲಖನೌನ್ನು ಘಾಜಿಪುರರೊಂದಿಗೆ ಸಂಪರ್ಕಿಸುತ್ತದೆ. ೨೨.೫೦೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ಲಾಭಕ್ಕಾಗಿ ತಮಿಳುನಾಡು ರಾಜಕೀಯ ಮಾಡುತ್ತದೆ: ಸಿಎಂ ಬೊಮ್ಮಾಯಿ

ಬೆಂಗಳೂರು, ನ. ೧೬: ಕರ್ನಾಟಕದ ಜಲ-ಸಂಬAಧಿತ ಯೋಜನೆಗಳಿಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮಿಳುನಾಡು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಿರುಪತಿ ಪ್ರವಾಸ ಮುಗಿಸಿ ನಗರಕ್ಕೆ ವಾಪಸಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರವನ್ನು ಜಲಶಕ್ತಿ ಸಚಿವಾಲಯ ಹಾಗೂ ಸಂಬAಧಪಟ್ಟ ಅಧಿಕಾರಿಗಳ ಪ್ರಸ್ತಾಪಿಸಲಾಗಿದೆ. ತಮಿಳುನಾಡು ಸ್ವಾತಂತ್ರ‍್ಯ ಪೂರ್ವದಿಂದಲೂ ತನ್ನ ಲಾಭಕ್ಕಾಗಿ ನೀರಿನ ರಾಜಕಾರಣ ಮಾಡುತ್ತಿದೆ. ನಾವು ತೆಗೆದುಕೊಳ್ಳುವ ನೀರಿನ ಯಾವುದೇ ಹೊಸ ಯೋಜನೆಗೆ ಅವರು ಉದ್ದೇಶಪೂರ್ವಕವಾಗಿ ಆಕ್ಷೇಪಿಸುತ್ತಾರೆ. ಅವರು ಏನೇ ಮಾಡಿದರೂ ನಾವು ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆAದು ಹೇಳಿದ್ದಾರೆ. ಇದೇ ವೇಳೆ ಬಿಟ್ ಕಾಯಿನ್ ಹಗರಣ ಕುರಿತು ಮಾತನಾಡಿದ ಅವರು, ಬಿಟ್ ಕಾಯಿನ್ ಬಗ್ಗೆ ಇಲ್ಲದ ವಿವಾದವನ್ನು ಪ್ರಸ್ತಾಪಿಸಿ ಅದನ್ನು ಜೀವಂತವಾಗಿಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಮಾಡಿರುವ ಆರೋಪಗಳು ಇಲ್ಲದ ವಿವಾದವನ್ನು ಜೀವಂತವಾಗಿಡುವ ಪ್ರಯತ್ನವಾಗಿದೆ. ಇದು ರಾಜಕೀಯ ಬಿಟ್ಟರೆ ಬೇರೇನೂ ಅಲ್ಲ. ಬಿಟ್ ಕಾಯಿನ್ ಕುರಿತು ಪದೇ ಪದೇ ನನ್ನನ್ನು ಕೇಳಬೇಡಿ. ನಾನು ಹೇಳಬೇಕಾದದ್ದನ್ನು ಈಗಾಗಲೇ ಹೇಳಿದ್ದೇನೆ. ಈ ಹಿಂದೆಯೂ ಹೇಳಿದ್ದೇನೆ; ಪ್ರತಿಪಕ್ಷದ ಬಳಿ ದಾಖಲೆಗಳಿದ್ದರೆ ತನಿಖಾ ಸಂಸ್ಥೆಗಳಿಗೆ ಸಲ್ಲಿಸಲಿ. ದಾಖಲೆಗಳಿದ್ದರೆ ಜಾರಿ ನಿರ್ದೇಶನಾಲಯ ಅಥವಾ ಇತರ ತನಿಖಾ ಸಂಸ್ಥೆಗಳಿಗೆ ನೀಡಲಿ. ನಾವು ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸುತ್ತಿದ್ದೇವೆಂದು ತಿಳಿಸಿದರು.