ಮಡಿಕೇರಿ, ನ. ೧೫: ಕೊಡಗು ಜಿಲ್ಲಾಧಿಕಾರಿಯಾಗಿದ್ದ, ಇತ್ತೀಚೆಗೆ ವರ್ಗಾವಣೆಗೊಂಡ ಚಾರುಲತಾ ಸೋಮಲ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ. ಎಂ.ಆರ್. ರವಿ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಚಾರುಲತಾ ಸೋಮಲ್ ಅವರನ್ನು ಕೊಡಗು ಜಿಲ್ಲೆಯಿಂದ ಈ ಹಿಂದೆಯೇ ವರ್ಗಾವಣೆ ಮಾಡಲಾಗಿತ್ತಾದರೂ, ಜಾಗ ನಿಗದಿಯಾಗಿರಲಿಲ್ಲ. ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಚಾರುಲತಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.