ಮಡಿಕೇರಿ, ನ. ೧೫ : ಕೊಡಗು ಜಿಲ್ಲೆಯ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ ವೇದಮೂರ್ತಿ ನಗರದ ಡಿಡಿಪಿಐ ಕಚೆೆÃರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಕೋವಿಡ್ -೧೯ ರ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ ಭೌತಿಕ ತರಗತಿಗಳು ಇದೀಗ ಪುನರಾರಂಭಗೊAಡಿದ್ದು, ಕೋವಿಡ್ ಮಾರ್ಗಸೂಚಿಯನ್ವಯ ಶಾಲೆಗಳು ಎಂದಿನAತೆ ನಡೆಯುತ್ತಿವೆ. ಜಿಲ್ಲೆಯ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಈ ಸಂದರ್ಭ ಡಿಡಿಪಿಐ ವೇದಮೂರ್ತಿ ತಿಳಿಸಿದರು.

ಜಿಲ್ಲೆಯ ಡಿಡಿಪಿಐ ಆಗಿ ಅಧಿಕಾರ ಸ್ವೀಕರಿಸಿದ ವೇದಮೂರ್ತಿ ಅವರನ್ನು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್.ಮಂಜುನಾಥ್, ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ವಾಗತಿಸಿದರು.