ಗೋಣಿಕೊಪ್ಪ ವರದಿ, ನ. ೧೫ ; ಸ್ವಾಮಿ ವಿವೇಕಾನಂದ ಯೂತ್‌ಮೂವ್‌ಮೆಂಟ್, ಜಿಲ್ಲಾ ರಕ್ತನಿಧಿ ಕೇಂದ್ರ, ಮೈಸೂರು ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ತಾ. ೧೮ ರಂದು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಬೆಳಗ್ಗೆ ೯ ಗಂಟೆಯಿAದ ಮಧ್ಯಾಹ್ನ ೧ ಗಂಟೆವರೆಗೆ ರಕ್ತದಾನ ಮಾಡಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ೯೦೦೮೭೩೨೨೭೯, ೮೮೬೧೨೪೪೨೨೮, ೮೨೯೬೬೯೩೮೬೦ ಸಂಪರ್ಕಿಸಬಹುದಾಗಿದೆ ಎಂದು ಸ್ವಾಮಿ ವಿವೇಕಾನಂದ ಯೂತ್‌ಮೂವ್‌ಮೆಂಟ್ ಸಂತಾನೋತ್ಪತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ವ್ಯವಸ್ಥಾಪಕಿ ಕೆ. ಕೆ. ಕುಸುಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.