ಮಡಿಕೇರಿ, ನ. ೧೫: ಶನಿವಾರಸಂತೆ ಯಲ್ಲಿ ನಡೆದ ಘಟನೆಯನ್ನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ರಾಜಕೀಯವಾಗಿ ದುರ್ಬಳಕೆ ಮಾಡಿಕೊಂಡು, ಘಟನೆಯನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾ ದಳ ಆರೋಪಿಸಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್, ಶನಿವಾರಸಂತೆಯಲ್ಲಿ ಇತ್ತೀಚಿಗೆ ನಡೆದ ಘಟನೆಗೆ ಸಂಬAಧಿಸದAತೆ ನ್ಯಾಯಕ್ಕಾಗಿ ಒತ್ತಾಯಿಸಿ ಅಲ್ಪಸಂಖ್ಯಾತ ಮಹಿಳೆಯರು ಪ್ರತಿಭಟಿಸುತ್ತಿರುವ ಸಂದರ್ಭ ಅಂಬೇಡ್ಕರ್‌ಗೆ ಜೈ ಎಂಬ ಘೋಷಣೆಯನ್ನು ಕೂಗಿದ್ದಾರೆ. ಈ ಸಂದರ್ಭ ಮಹಿಳೆ ಯೊಬ್ಬರು ಸುಸ್ತಾಗಿ ಬಿದ್ದಾಗ ಉರ್ದು ಭಾಷೆಯಲ್ಲಿ ನೀರು ನೀಡುವಂತೆ ಕೇಳಿದ್ದಾರೆ. ಇದನ್ನು ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ತಿರುಚಿ ಪಾಕಿಸ್ತಾನಕ್ಕೆ ಜೈ ಎಂದು ಘೋಷಣೆ ಕೂಗಿದ್ದಾರೆ ಎಂದು ಬಿಂಬಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಕೊಡಗಿನ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಸರಕಾರದ ಸಾಧನೆಯನ್ನು ಹೇಳಿ ಮತಪಡೆಯುವುದನ್ನು ಬಿಟ್ಟು ಕೋಮು ದ್ವೇಷ ಸೃಷ್ಟಿಸುತ್ತಿರುವ ಬಿಜೆಪಿ ನಡೆ ಖಂಡ ನೀಯ ಎಂದರು.

ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಖ್ ಖಾನ್ ಮಾತನಾಡಿ, ರಾಜಕಾರಣಕ್ಕಾಗಿ ಬಿಜೆಪಿ ಪ್ರಕರಣವನ್ನು ದಿಕ್ಕುತಪ್ಪಿಸಲು ಹೊರಟಿದೆ. ಪೊಲೀಸ್ ಇಲಾಖೆ ಬಿಜೆಪಿ ಏಜೆಂಟರAತೆ ವರ್ತಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ದೂರು ನೀಡಲು ತೆರಳಿದರೆ ಅದನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ಇಂತಹ ಪೊಲೀಸ್ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾಹಿಸಬೇಕೆಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ನಗರ ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಂಜು ಕಾವೇರಪ್ಪ ಜಿಲ್ಲಾ ಉಪಾಧ್ಯಕ್ಷ ಬಲ್ಲಚಂಡ ಗೌತಮ್, ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ರವಿ ಇದ್ದರು.