ಕುಶಾಲನಗರ, ನ. ೧೫: ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಆಶ್ರಯದಲ್ಲಿ ಶಂಕರ್ ನಾಗ್ ಆಟೋ ನಿಲ್ದಾಣ ಮತ್ತು ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಸಹಯೋಗದೊಂದಿಗೆ ೬೬ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ವಾಸವಿ ಮಹಲ್ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕ ಎಂ.ಎನ್.ಚAದ್ರಮೋಹನ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನಿವೃತ್ತ ಉಪನ್ಯಾಸಕ ನಾರಾಯಣ್ ಮಾತನಾಡಿ, ಪ್ರತಿನಿತ್ಯ ನಮ್ಮ ದೈನಂದಿನ ವ್ಯವಹಾರದಲ್ಲಿ ಕನ್ನಡ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು ಕರವೇ ತಾಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾಧ್ಯಕ್ಷ ಪಿ.ಕೆ.ಜಗದೀಶ್, ವೈದ್ಯೆ ಡಾ.ರಶ್ಮಿ, ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷ ರವಿಗೌಡ, ಕುಶಾಲನಗರ ತಾಲೂಕು ಉಪಾಧ್ಯಕ್ಷ ಯೋಗೀಶ್, ನಗರ ಘಟಕ ಅಧ್ಯಕ್ಷ ಶಿವಸ್ವಾಮಿ, ಮಹಿಳಾ ಘಟಕ ಅಧ್ಯಕ್ಷೆ ಜಮೀಲಾ, ವಿವಿಧ ಘಟಕಗಳ ಪದಾಧಿಕಾರಿಗಳಾದ ಪುಟ್ಟಸ್ವಾಮಿ, ಕುಮಾರ್, ಮಂಜುನಾಥ್ ರೈ, ಟಿ.ಜೆ.ರಾಜು, ರೊನಾಲ್ಡ್, ಪ್ರಮೋದ್, ಸುಬ್ಬಯ್ಯ, ಕಿರಣ್, ಟಿ.ಕೆ.ಜಗದೀಶ್, ಪ್ರಕಾಶ್ ಮತ್ತಿತರರು ಇದ್ದರು.