ಆಲೂರು ಸಿದ್ದಾಪುರ/ಶನಿವಾರಸಂತೆ, ನ. ೧೫: ನಗರದಲ್ಲಿ ಹಿಂದೂ ಕಾರ್ಯಕರ್ತರ ಮೇಲಿನ ಗುಂಪು ಹಲ್ಲೆಯನ್ನು ಖಂಡಿಸಿ ಹಿಂದೂಪರ ಸಂಘÀಟನೆಗಳು ಕರೆ ನೀಡಿದ್ದ ಶನಿವಾರಸಂತೆ ಪಟ್ಟಣ ಬಂದ್ ಅನ್ನು ಪೊಲೀಸರು ತಡೆದರು. ಇದನ್ನು ಹಿಂದೂ ಕಾರ್ಯಕರ್ತರು ಖಂಡಿಸಿ ಮೌನಪ್ರತಿಭಟನೆ ನಡೆಸುವ ಮೂಲಕ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸೆಕ್ಷನ್ ೧೪೪ ವಿಧಿಸಿದ್ದರು ಅದನ್ನು ನಿರ್ಬಂಧಿಸಿದ ಹಿನ್ನೆಲೆ ೧೦೦ಕ್ಕೂ ಹೆಚ್ಚು ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಕಿತ್ತೂರುರಾಣಿ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡು ಪ್ರತಿಭಟನೆ ಮೆರವಣಿಗೆಗೆ ಸಜ್ಜಾಗುತ್ತಿರುವ ಸಂದರ್ಭ ಸ್ಥಳಕ್ಕೆ ಆಗಮಿಸಿದ ಸೋಮವಾರಪೇಟೆ ತಹಶೀಲ್ದಾರ್ ಗೋವಿಂದ್‌ರಾಜ್, ಸೋಮವಾರಪೇಟೆ ಡಿವೈಎಸ್‌ಪಿ ಮಹೇಶ್ ಪಟ್ಟಣದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮವಾಗಿ ಬೆಳಗ್ಗೆ ೭ ಗಂಟೆಯಿAದ ಮಂಗಳವಾರ ಬೆಳಗ್ಗೆ ೭ ಗಂಟೆಯವರೆಗೆ ೧೪೪ ಸೆಕ್ಷನ್ ಜಾರಿಗೊಳಿಸಿದರು. ನಿಷೇದಾಜ್ಞೆ ಇರುವುದರಿಂದ ಪಟ್ಟಣದಲ್ಲಿ ಪ್ರತಿಭಟನೆ ಮೆರವಣಿಗೆ, ಸಾರ್ವಜನಿಕ ಸಭೆ ನಡೆಸದಂತೆ ಹಾಗೂ ೫ ಕಿಂತ ಹೆಚ್ಚಿನ ಜನರು ಗುಂಪು ಸೇರಬಾರದೆಂದು ಧ್ವನಿವರ್ಧಕದಲ್ಲಿ ಸಾರ್ವಜನಿಕರಿಗೆ ತಿಳಿಸಿದರು.

ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದ ಹಿನ್ನೆಲೆ ಅಸಮಾಧಾನಗೊಂಡ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಇಲಾಖೆ ಪೊಲೀಸರು ಹಿಂದೂ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಘೋಷಣೆ ಕೂಗಿದರು. ಈ ಸಂದರ್ಭ ಹಿಂದೂಪರ ಸಂಘಟನೆಯ ನೂರಕ್ಕಿಂತ ಹೆಚ್ಚಿನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ, ಡಿಆರ್ ತುಕಡಿಗಳನ್ನು ನಿಯೋಜಿಸಿ ಭಾರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪಟ್ಟಣದಲ್ಲಿ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರು. ಶಾಲಾ-ಕಾಲೇಜು ಎಂದಿನAತೆ ತೆರೆದಿತ್ತು. ಸಂಚಾರ ವ್ಯವಸ್ಥೆ ಎಂದಿನAತೆ ಇತ್ತು.

ಸೈನಿಕನ ಆಕ್ರೋಶ : ವಿವಾಹ ಸಮಾರಂಭಕ್ಕೆ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ನಿವೃತ್ತ ಸೈನಿಕರೊಬ್ಬರ ವಾಹನವನ್ನು ಪೊಲೀಸರು ತಡೆದಾಗ ನಿವೃತ್ತ ಸೈನಿಕ ಪೊಲೀಸರ ವರ್ತನೆ ಖಂಡಿಸಿ ರಸ್ತೆಯಲ್ಲೇ ಧರಣಿ ಕುಳಿತು ಆಕ್ರೋಶ ಹೊರ ಹಾಕಿದರು.

ಕುಶಾಲನಗರ ಡಿವೈಎಸ್‌ಪಿ ಶೈಲೇಂದ್ರ, ಶನಿವಾರಸಂತೆ ವೃತ್ತ ನಿರೀಕ್ಷಕ ಪರಶಿವಮೂರ್ತಿ ನೇತೃತ್ವದಲ್ಲಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ ಭಜರಂಗದಳದ ರಾಜ್ಯ ಸಂಚಾಲಕ ರಘು ಸಕಲೇಶಪುರ, ಕೊಡಗು ಜಿಲ್ಲಾ ಸಂಚಾಲಕ ಸುಭಾಶ್, ಶನಿವಾರಸಂತೆ ಹಿಂದೂಪರ ಸಂಘಟನೆಯ ಪ್ರಮುಖರಾದ ಎಸ್.ಎನ್.ರಘು, ಧನುಂಜಯ್, ಅಶೋಕ್, ಸುರೇಶ್ ಜಾಗೇನಹಳ್ಳಿ, ಯೋಗಾನಂದ್, ಕುಮಾರ್. ದಿಲೀಪ್, ಗಿರೀಶ್, ರಕ್ಷಿತ್, ನಿತಿನ್ ಮುಂತಾದವರು ಭಾಗವಹಿಸಿದ್ದರು ಪ್ರಮುಖರೊಂದಿಗೆ ಚರ್ಚಿಸಿದ ಎಸ್.ಪಿ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಹಿಂದೂಪರ ಸಂಘಟನೆಯ ಕೆಲ ಪ್ರಮುಖರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ಪ್ರತಿಭಟನೆ ಮಾಡದಂತೆ ಮನವೊಲಿಸಿದರು. ಹಿಂದೂ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರತಿಭಟನಕಾರರಿಗೆ ಭರವಸೆ ನೀಡಿದಾಗ ಕಾರ್ಯಕರ್ತರು ಮಣಿದು ಪ್ರತಿಭಟನೆಯನ್ನು ಕೈಬಿಟ್ಟು ಪಟ್ಟಣದ ಕೆಆರ್‌ಸಿ ವೃತ್ತದಿಂದ ಗುಡುಗಳಲೆ ಜಂಕ್ಸನ್‌ವರೆಗೆ ಮೌನ ಮೆರವಣಿಗೆ ನಡೆಸಿದರು. ಪ್ರತಿಭಟನೆ ಹಿಂತೆಗೆದ ಹಿನ್ನೆಲೆ ಪೊಲೀಸರು ಬಂಧಿಸಿದ ಹಿಂದೂಪರ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿದರು.