
ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಕುರಿತಾಗಿ ರಾಜ್ಯ ಸರಕಾರದ ಮೂಲಕ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಕೋರಿ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
(ಮೊದಲ ಪುಟದಿಂದ) ಅವರಿಗೆ ಪತ್ರ ಬರೆದು ಕೋರಿದ್ದಾರೆ.
ಈ ಕುರಿತಾಗಿ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದ್ದು, ಈ ಪತ್ರವನ್ನು ಉಲ್ಲೇಖಿಸಿ ಶಾಸಕರು ಮುಖ್ಯಮಂತ್ರಿ ಗಳಿಗೆ ಪತ್ರ ರವಾನಿಸಿದ್ದಾರೆ.
ಬಹಳ ಪ್ರಾಚೀನವೂ, ಸಂಪದ್ಭರಿತವೂ, ಸಾಂಸ್ಕೃತಿಕ ಮಹತ್ವದ್ದೂ ಆಗಿರುವ ಕೊಡವ ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಚೇದಕ್ಕೆ ಸೇರ್ಪಡೆಗೊಳಿಸುವ ಬೇಡಿಕೆಯು ಹಲವು ವರ್ಷಗಳಿಂದಲೂ ಇದೆ. ಈ ಬಗ್ಗೆ ರಾಜ್ಯ ಸರಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆಯಾದರೂ ಯಾವದೇ ಪ್ರತಿಕ್ರಿಯೆಗಳು ಬಂದಿಲ್ಲ ಎಂದು ತಿಳಿಸಿರುವ ಬೋಪಯ್ಯ ಅವರು ಅಕಾಡೆಮಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ಇದರೊಂದಿಗೆ ವಿಶಿಷ್ಟ ಭೌಗೋಳಿಕ, ಚಾರಿತ್ರಿಕೆ ಹಿನ್ನೆಲೆಯ ಬಹುಪ್ರಾಚೀನತೆಯ ಹಾಗೂ ಭಾಷಾ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರುವ ಕನ್ನಡ ಸೋದರ ಭಾಷೆಯೂ ಆಗಿರುವ ಕೊಡವ ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಬೋಪಯ್ಯ ಅವರು ಕೋರಿದ್ದಾರೆ.