ಮಡಿಕೇರಿ, ನ.೧೬ : ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಾದಾಪುರ, ಗರಗಂದೂರು ಮತ್ತು ಶನಿವಾರಸಂತೆ ಭಾಗದಲ್ಲಿ ಮುಸಲ್ಮಾನರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ನಾಲ್ಕುನಾಡು ಮುಸ್ಲಿಂ ಜಮಾಯತ್ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್, ಉಪಾಧ್ಯಕ್ಷರಾದ ಪಿ.ಎಂ.ಸಲೀA ಹ್ಯಾರಿಸ್, ಪಿ.ಎಂ.ಹAಸ ಪಡಿಯಾಣಿ, ಹೆಚ್.ಎ.ಹಂಸ ಕೊಟ್ಟಮುಡಿ ಹಾಗೂ ಖಜಾಂಚಿ ಎಂ.ಎ.ಮನ್ಸೂರ್ ಆಲಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು; ಕ್ಷÄಲ್ಲಕ ವಿಚಾರಕ್ಕೆ ನಡೆದ ಕಲಹಗಳಿಗೂ ಕೋಮು ಪ್ರಚೋದನೆಯ ಬಣ್ಣ ಬಳಿಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಹಿಂದೂ ಹಾಗೂ ಮುಸಲ್ಮಾನರು ಒಗ್ಗಟ್ಟಿನಿಂದ ಶಾಂತಿಯುತವಾಗಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಸೋಮವಾರಪೇಟೆ ತಾಲೂಕಿನ ಕೆಲವು ಭಾಗಗಳಲ್ಲಿ ಮಾತ್ರ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ. ಶನಿವಾರಸಂತೆ ಪೊಲೀಸ್ ಠಾಣೆ ಎದುರು ಮುಸಲ್ಮಾನ ಮಹಿಳೆಯರು ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ “ಅಂಬೇಡ್ಕರ್ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆ. ಆದರೆ ಕೆಲವು ವ್ಯಕ್ತಿಗಳು ಈ ಘೋಷಣೆಯನ್ನು ತಿರುಚಿ “ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಇದು ಶಾಂತಿಯುತ ಸಮಾಜದ ಸ್ವಾಸ್ಥö್ಯವನ್ನು ಕೆಡಿಸುವ ಪ್ರಯತ್ನವಾಗಿದೆ ಎಂದು ಹೇಳಿರುವ ಪ್ರಮುಖರು, ಘೋಷಣೆಯನ್ನು ತಿರುಚಿ ಜನರ ಹಾದಿ ತಪ್ಪಿಸಿದವರನ್ನು ತಕ್ಷಣ ಬಂಧಿಸಬೇಕೆAದು ಒತ್ತಾಯಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಧ್ಯ ಪ್ರವೇಶಿಸಿ ಘಟನಾವಳಿಗಳ ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಉನ್ನತ ಮಟ್ಟದ ತನಿಖೆ ನಡೆಸಬೇಕು. ಜಿಲ್ಲೆಯ ಜವಾಬ್ದಾರಿಯುತ ಜನಪ್ರತಿನಿಧಿಗಳು ಕೂಡ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಎಚ್ಚೆತ್ತುಕೊಂಡು ಜಿಲ್ಲೆಯಲ್ಲಿ ಶಾಂತಿ ನೆಲೆಸುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಹೀಗೆ ಮುಂದುವರೆದರೆ ಎಲ್ಲಾ ಮುಸಲ್ಮಾನರು ಬಂಧುಗಳು ನ್ಯಾಯಕ್ಕಾಗಿ ಒತ್ತಾಯಿಸಿ ಕಾನೂನಿನ ಚೌಕಟ್ಟಿನಡಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಾದಾಪುರ ಮತ್ತು ಗರಗಂದೂರಿನಲ್ಲಿ ಹಲ್ಲೆಗೊಳಗಾದ ಮುಸ್ಲಿಂ ಯುವಕರು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಮಿತಿಯು ಇವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಸಂಬAಧಪಟ್ಟ ಅಧಿಕಾರಿಗಳು ಕೂಡ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಮುಖರು ಒತ್ತಾಯಿಸಿದ್ದಾರೆ.