ಮಡಿಕೇರಿ, ನ. ೧೮: ಜಿಲ್ಲೆಯ ಹಾರಂಗಿ ಅಣೆಕಟ್ಟೆ ನಿರ್ಮಾಣ ಸಂದರ್ಭ ಮುಳುಗಡೆಯಾದ ಅರಣ್ಯ ಪ್ರದೇಶಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಗೆ ಸೇರಿದ ೧೧೭೨೨.೨೯ ಹೆಕ್ಟೇರ್ ಸಿ ಮತ್ತು ಡಿ ಜಾಗವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವAತೆ ರಾಜ್ಯ ಉಚ್ಚನ್ಯಾಯಾಲಯ ನೀಡಿರುವ ತೀರ್ಪನ್ನು ಮರು ಪರಿಶೀಲನೆ ಮಾಡಬೇಕೆಂದು ರಾಜ್ಯ ಸರಕಾರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ.

ಸೋಮವಾರಪೇಟೆ ತಾಲೂಕಿನ ಹುದುಗೂರು ಗ್ರಾಮದಲ್ಲಿ ಹರಿಯುತ್ತಿರುವ ಹಾರಂಗಿ ನದಿಗೆ ಅಡ್ಡಲಾಗಿ ಹಾರಂಗಿ ಜಲಾಶಯ ನಿರ್ಮಾಣ ಮಾಡುವ ಸಂದರ್ಭ ಸುತ್ತಮುತ್ತಲಿನಲ್ಲಿ ನೆಲೆಸಿದ್ದ ನಿವಾಸಿಗಳ ಮನೆ ಹಾಗೂ ಜಾಗ ಮುಳುಗಡೆ ಗೊಂಡಿದ್ದವು. ಇದಕ್ಕೆ ಪರ್ಯಾಯವಾಗಿ ಯಡವನಾಡು ಮೀಸಲು ಅರಣ್ಯ ಪ್ರದೇಶದಿಂದ ೯೦೦ಎಕರೆ ಹಾಗೂ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ೩೦೦೦ಎಕರೆ ಜಾಗವನ್ನು ಕಂದಾಯ ಗ್ರಾಮವನ್ನಾಗಿ ಘೋಷಣೆ ಮಾಡಿ ನೀಡಲಾಗಿತ್ತು. ಇದಕ್ಕೆ ಪರ್ಯಾಯವಾಗಿ ಅರಣ್ಯ ಇಲಾಖೆಗೆ ಕಂದಾಯ ಇಲಾಖೆಯಿಂದ ೧೮೦೦೦ಎಕರೆ ಜಾಗ ಹಸ್ತಾಂತರ ಮಾಡುವಂತೆ ಸರಕಾರ ಸೂಚಿಸಿತ್ತು. ಆದರೆ ಜಾಗ ಹಸ್ತಾಂತರ ಮಾಡಿಲ್ಲವೆಂದು ಕೆಲವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ೧೧೭೨೨.೨೯ ಹೆಕ್ಟೇರ್ ಸಿ ಮತ್ತು ಡಿ ಜಾಗವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸು ವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಂದಾಯ ಇಲಾಖಾ ವ್ಯಾಪ್ತಿಯಲ್ಲಿರುವ ಸಿ ಮತ್ತು ಡಿ ಜಾಗವನ್ನು ಸರ್ವೆ ಮೂಲಕ ಗುರುತಿಸುವ ಕಾರ್ಯವಾಗುತ್ತಿದೆ.

೧೯೭೦ರಲ್ಲಿ ಹಾರಂಗಿ ಜಲಾಶಯ ನಿರ್ಮಾಣ ಕಾರ್ಯ ಆರಂಭಗೊAಡಿದ್ದು, ಈ ಸಂದರ್ಭದಲ್ಲಿ ಸುತ್ತಮುತ್ತಲಿನಲ್ಲಿ ನೆಲೆಸಿದ್ದವರ ಮನೆ ಹಾಗೂ ಜಾಗ ಮುಳುಗಡೆಗೊಂಡಾಗ ಒಟ್ಟು ೩೯೦೦ ಎಕರೆ ಅರಣ್ಯ ಪ್ರದೇಶವನ್ನು ಕಂದಾಯ ಇಲಾಖೆಗೆ ಪುನರ್ವಸತಿಗಾಗಿ ಹಸ್ತಾಂತರಿಸಲಾಗಿತ್ತು. ನಂತರದಲ್ಲಿ ೧೨.೫.೧೯೭೨ರಲ್ಲಿ ೧೮೦೦೦ ಎಕರೆ ಜಾಗವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸು ವಂತೆ ಸರಕಾರ ಕಂದಾಯ ಇಲಾಖೆಗೆ ನಿರ್ದೇಶಿಸಿತ್ತು. ಆದರೆ, ಅಷ್ಟೊಂದು ಜಾಗ ಲಭ್ಯವಿಲ್ಲದ ಕಾರಣ ಹಸ್ತಾಂತರ ಆಗಿರಲಿಲ್ಲ.

(ಮೊದಲ ಪುಟದಿಂದ) ಈ ಸಂಬAಧ ಕೆಲವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಆಧಾರದಲ್ಲಿ ನ್ಯಾಯಾಲಯವು ತಾ. ೮.೪.೨೦೨೧ ರಂದು ೧೧೭೨೨.೨೯ ಹೆಕ್ಟೇರ್ ಸಿ ಮತ್ತು ಡಿ ಜಾಗವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವAತೆ ಸರಕಾರಕ್ಕೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಸರಕಾರದ ಸೂಚನೆಯಂತೆ ಜಿಲ್ಲಾಧಿಕಾರಿಗಳು ಅರಣ್ಯ - ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಉಭಯ ಇಲಾಖೆಗಳ ಜಂಟಿ ಸರ್ವೆ ನಡೆಸಿ ಲಭ್ಯವಿರುವ ಪೈಸಾರಿ ಹಾಗೂ ಸಿ ಮತ್ತು ಡಿ ಜಾಗದ ಮಾಹಿತಿ ನೀಡುವಂತೆ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಜಿಲ್ಲೆಯ ೪೭ ಗ್ರಾಮಗಳಲ್ಲಿ ಸರ್ವೇ ಕಾರ್ಯ ನಡೆಸಿ ಜಾಗ ಗುರುತು ಮಾಡಿದೆ.

ಮರುಪರಿಶೀಲನೆಗೆ ಆಗ್ರಹ : ಈ ವಿಚಾರಕ್ಕೆ ಸಂಬAಧಿಸಿದAತೆ ಈಗಾಗಲೇ ಅರಣ್ಯ ಇಲಾಖೆಗೆ ನೀಡಬೇಕಾಗಿರುವ ಜಾಗವನ್ನು ನೀಡಲಾಗಿದೆ. ಸಿ ಮತ್ತು ಡಿ ಜಾಗ ಅರಣ್ಯ ಇಲಾಖೆಗೆ ಬರುವುದಿಲ್ಲ. ಪ್ರಕರಣಕ್ಕೆ ಸಂಬAಧಿಸಿದAತೆ ಅರ್ಜಿದಾರರು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸರಕಾರದ ಅಧಿಕಾರಿಗಳು ಸರಕಾರಿ ಅಭಿಯೋಜಕರು, ಜಿಲ್ಲಾಡಳಿತ, ನ್ಯಾಯಾಲಯಕ್ಕೆ ವಾಸ್ತವ ಮಾಹಿತಿ ನೀಡುವಲ್ಲಿ ವಿಫಲವಾಗಿರುವುದರಿಂದ ನ್ಯಾಯಾಲಯ ಈ ರೀತಿಯ ಆದೇಶ ಮಾಡಿದೆ. ಈ ಪ್ರಕರಣದ ಬಗ್ಗೆ ಸರಕಾರ ಮರುಪರಿಶೀಲನೆಗೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕೆಂದು ಜಿಲ್ಲೆಯ ಶಾಸಕ ಕೆ.ಜಿ. ಬೋಪಯ್ಯ ಅವರು ತಾರೀಕು ೨೮.೯.೨೦೨೧ ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.

ಅಲ್ಲದೆ ಶಾಸಕ ಅಪ್ಪಚ್ಚು ರಂಜನ್ ಅವರು ಕೂಡ ಮೇಲ್ಮನವಿ ಸಲ್ಲಿಸಿದ್ದರು. ಇದರೊಂದಿಗೆ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಕೂಡ ಸರಕಾರ, ಜಿಲ್ಲಾಡಳಿತ, ಕಂದಾಯ ಇಲಾಖೆ ಪ್ರಕರಣಕ್ಕೆ ಸಂಬAಧಿಸಿದAತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕೆಂದು ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಸರಕಾರ ಈ ಪ್ರಕರಣಕ್ಕೆ ಸಂಬAಧಿಸಿದAತೆ ಮರು ಪರಿಶೀಲನೆ ಮಾಡಬೇಕೆಂದು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ. ವಿಚಾರಕ್ಕೆ ಸಂಬAಧಿಸಿದAತೆ ಜಿಲ್ಲಾ ಉಪವಿಭಾಗಾಧಿಕಾರಿಗಳು ಸಮಗ್ರ ಪೂರಕ ಮಾಹಿತಿಗಳನ್ನು ಒದಗಿಸಲಿದ್ದಾರೆ ಎಂದು ಕಂದಾಯ ಇಲಾಖೆ ಕಾನೂನು ವಿಭಾಗದ ಹಾಗೂ ಉಪಕಾರ್ಯದರ್ಶಿ ಕೆ.ಎಂ. ಪುಟ್ಟಸ್ವಾಮಿ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.