ಮಡಿಕೇರಿ, ನ. ೧೮: ರಾಜ್ಯದಲ್ಲಿ ಕನ್ನಡ ಭಾಷೆ ಕಟ್ಟುನಿಟ್ಟಾಗಿ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಕನ್ನಡ ಕಾಯಕ ವರ್ಷವನ್ನಾಗಿ ಆಚರಿಸುತ್ತಿರುವ ಹಿನ್ನೆಲೆ ಸೋಮವಾರಪೇಟೆ ತಾಲೂಕಿನ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ತಾ. ೨೬ ರಂದು ಬೆಳಿಗ್ಗೆ ೧೦ ಗಂಟೆಗೆ ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಆವರಣದಲ್ಲಿ ವಿವಿಧ ಸ್ಪರ್ಧೆ ಏರ್ಪಡಿಸಲಾಗಿದೆ.
ಸ್ಪರ್ಧೆಯ ವಿವರ: ೧ನೇ ತರಗತಿಯಿಂದ ೪ನೇ ತರಗತಿಯ ವರೆಗೆ ಪ್ರಕೃತಿಯ ಚಿತ್ರ ಬಿಡಿಸುವ ಸ್ಪರ್ಧೆ. (ಒಂದು ಶಾಲೆಯಿಂದ ಇಬ್ಬರು ಸ್ಪರ್ಧಿಗಳು ಭಾಗವಹಿಸಬಹುದು). ೫ ರಿಂದ ೭ನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ನಾಡು, ನುಡಿಗೆ ಸಂಬAಧಿಸಿದ ಚಿತ್ರ ಬಿಡಿಸುವ ಸ್ಪರ್ಧೆ. (ಒಂದು ಶಾಲೆಯಿಂದ ಇಬ್ಬರು ಸ್ಪರ್ಧಿಗಳು ಭಾಗವಹಿಸಬಹುದು.). ೫ ರಿಂದ ೭ನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ನಾಡು, ನುಡಿ ಕುರಿತ ಕನ್ನಡ ಗೀತೆಗಳ ಸಮೂಹ ಗಾಯನ ಸ್ಪರ್ಧೆ. (ಒಂದು ಶಾಲೆಯಿಂದ ಗರಿಷ್ಠ ನಾಲ್ಕು ಮಂದಿಯ ಒಂದು ತಂಡ ಭಾಗವಹಿಸಬಹುದು).
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ: ವಿಷಯ: ಕನ್ನಡಿಗರಿಗೆ ಕನ್ನಡತನ ಏಕೆ ಅನಿವಾರ್ಯ. (ಒಂದು ಶಾಲೆಯಿಂದ ಇಬ್ಬರು ಭಾಗವಹಿಸಬಹುದು). ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ನಾಡು, ನುಡಿಯ ಬಗ್ಗೆ ಕನ್ನಡ ಸಮೂಹ ಗಾಯನ ಸ್ಪರ್ಧೆ (ಒಂದು ಶಾಲೆಯಿಂದ ಗರಿಷ್ಠ ನಾಲ್ಕು ಮಂದಿಯ ಒಂದು ತಂಡ ಭಾಗವಹಿಸಬಹುದು). ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಕನ್ನಡ ಭಾಷೆ ಬೆಳೆಸುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳು (ಒಂದು ಕಾಲೇಜಿನಿಂದ ಇಬ್ಬರು ಸ್ಪರ್ಧಿಗಳು ಭಾಗವಹಿಸಬಹುದು). (ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆ, ಶಾಂತಳ್ಳಿ, ಶನಿವಾರಸಂತೆ, ಕೊಡ್ಲಿಪೇಟೆ ಹೋಬಳಿಯ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಸೋಮವಾರಪೇಟೆ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್. ಮಹೇಶ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ. ೯೪೮೧೦೫೯೨೨೩ ಸಂಪರ್ಕಿಸಬಹುದು.