ಕೂಡಿಗೆ, ನ. ೧೮: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಮುಳ್ಳುಸೋಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು.

ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಿರುವ ಮಳೆ ನೀರು ಕೊಯ್ಲು ಘಟಕ ಹಾಗೂ ಸಾರ್ವಜನಿಕ ಉದ್ಯಾನವನಗಳನ್ನು ಮತ್ತು ಶಾಲೆ ಆವರಣದ ಉದ್ಯಾನವನ್ನು ಪರಿಶೀಲನೆ ನಡೆಸಿದರು. ನಂತರ ಕಾರ್ಯವೈಖರಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಈ ಸಂದರ್ಭ ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರಮೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜು, ಸದಸ್ಯರಾದ ಶಿವಾನಂದ, ಅಭಿವೃದ್ಧಿ ಅಧಿಕಾರಿ ಸುಮೇಶ್, ಸಂತೋಷ್, ತಾಂತ್ರಿಕ ಸಹಾಯಕ ಇಂಜಿನಿಯರ್ ಕಿಶೋರ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.