ಮಡಿಕೇರಿ, ನ. ೧೮ : ಜಿಲ್ಲೆಯ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಸುಮಾರು ೧೭,೯೩೦ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಡಿಸೆಂಬರ್, ೧೮ ರಂದು ನಡೆಯುವ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಈ ಪ್ರಕರಣಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಬಿ.ಎಲ್.ಜಿನರಾಳಕರ್ ತಿಳಿಸಿದ್ದಾರೆ.
ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ೧೨,೪೨೪ ಕ್ರಿಮಿನಲ್ ಮತ್ತು ೫,೫೦೬ ಸಿವಿಲ್ ಪ್ರಕರಣಗಳಿದ್ದು, ಈ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಹೇಳಿದರು.
(ಮೊದಲ ಪುಟದಿಂದ) ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯದ ಆವರಣಗಳಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಡಿಸೆಂಬರ್, ೧೮ ರಂದು ನಡೆಯುವ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದರು.
ಕಾನೂನು ನೆರವು ಘಟಕ(ಬಹುವಿಧ ಸೇವೆಗಳು-ಒಂದೇ ಸೂರಿನ ಅಡಿಯಲ್ಲಿ) ನ್ಯಾಯ ದೇಗುಲ, ಮೊದಲನೆ ಮಹಡಿ, ಎಚ್.ಸಿದ್ದಯ್ಯ ರಸ್ತೆ, ಬೆಂಗಳೂರು-೫೬೦೦೨೭, ದೂ.ಸಂ.೦೮೦-೨೨೧೧೧೭೩೦ ವೆಬ್‌ಸೈಟ್ ತಿತಿತಿ.ಞsಟsಚಿ.ಞಚಿಡಿ.ಟಿiಛಿ.iಟಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಹಾಗೂ ಸಹಾಯವಾಣಿ ಸಂಖ್ಯೆ ೧೮೦೦-೪೨೫-೯೦೯೦೦ ನ್ನು ಸಂಪರ್ಕಿಸಬಹುದು.