ಗೋಣಿಕೊಪ್ಪ ವರದಿ, ನ. ೧೮: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸರಗೂರು ಘಟಕ, ಜಿಲ್ಲಾ ರಕ್ತನಿಧಿ ಕೇಂದ್ರ, ಮೈಸೂರು ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗ ದಲ್ಲಿ ಗುರುವಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ೧೦೮ ಮಂದಿ ರಕ್ತದಾನ ಮಾಡಿದರು. ಮಹಿಳೆ, ವಿದ್ಯಾರ್ಥಿಗಳು ಕೂಡ ಭಾಗವಹಿಸಿ ಜೀವದ ಮಹತ್ವ ಸಾರಿದರು.
ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮ ಅಧ್ಯಕ್ಷ ಅಮೃತಾನಂದ ಮಾತನಾಡಿ, ಸ್ವಾಮಿ ವಿವೇಕಾನಂದರು ಸೇವೆ ಮತ್ತು ತ್ಯಾಗ ಸಮಾಜಕ್ಕೆ ನೀಡುವ ದೊಡ್ಡ ಕೊಡುಗೆ ಎಂದು ಹೇಳಿದ್ದಾರೆ. ರಕ್ತದಾನದ ಮೂಲಕ ಸಾಕಾರಗೊಳ್ಳುತ್ತಿದೆ ಎಂದರು.
ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಹಿರಿಯ ಸ್ವಾಮೀಜಿ ಪರಹಿತನಂದಾ, ವಿವೇಕಾನಂದ ಯೂತ್‌ಮೂವ್‌ಮೆಂಟ್ ಸಮುದಾಯ ಆಧರಿತ ಆರೋಗ್ಯ ಕಾರ್ಯಕ್ರಮ ಮುಖ್ಯಸ್ಥ ಡಾ. ಡೆನ್ನಿಸ್ ಡಿ. ಚೌಹಾಣ್, ಮಂಡಳಿ ಸದಸ್ಯ ಡಾ. ಕೆ. ಎನ್. ಚಂದ್ರಶೇಖರ್, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರ ಬಿ. ಚೇತನ್, ದಾನಿ ದರ್ಶನ್ ನಂಜಪ್ಪ, ಸರಗೂರು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂತಾನೋತ್ಪತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ವ್ಯವಸ್ಥಾಪಕಿ ಕೆ. ಕೆ. ಕುಸುಮ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಇದ್ದರು.