ಜಮ್ಮು-ಕಾಶ್ಮೀರ: ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ಐವರು ಉಗ್ರರ ಹತ್ಯೆ
ಶ್ರೀನಗರ,ನ. ೧೭: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ಸಂಜೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಐವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕುಲ್ಗಾಂ ಜಿಲ್ಲೆಯ ಪೊಂಬೈ ಮತ್ತು ಗೋಪಾಲ್‌ಪುರಾ ಗ್ರಾಮಗಳಲ್ಲಿ ಎನ್‌ಕೌಂಟರ್‌ಗಳು ನಡೆದಿದ್ದು, ಉಗ್ರರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ನಂತರ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡಗಳು ಶೋಧಕಾರ್ಯ ಪ್ರಾರಂಭಿಸಿದವು. ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್ ಆಗಿ ಮಾರ್ಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದ್ದು, ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇಂದು ಒಟ್ಟು ಐವರು ಉಗ್ರರನ್ನು ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಾರತೀಯ ಸೇನೆಯಿಂದ ಎನ್‌ಕೌಂಟರ್ ನಡೆಸಿ, ಹತ್ಯೆ ಮಾಡಲಾಗಿದೆ. ಪೊಂಬೈ ಮತ್ತು ಗೋಪಾಲ್‌ಪುರ ಈ ಎರಡೂ ಗ್ರಾಮಗಳಲ್ಲಿ ಇನ್ನೂ ಭಾರತೀಯ ಸೇನೆಯಿಂದ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ವರದಿಯ ಪ್ರಕಾರ, ನಿಷೇಧಿತ ಭಯೋತ್ಪಾದಕ ಸಂಘಟನೆ ಟಿಆರ್‌ಎಫ್‌ನ ಭಯೋತ್ಪಾದಕ ಕಮಾಂಡರ್ ಅಫಾಕ್ ಸಿಕಂದರ್ ಗೋಪಾಲ್‌ಪುರಾದಲ್ಲಿ ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ.
ಡಿಸೆಂಬರ್ ೩೦ ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು ಆದೇಶ
ಬೆಂಗಳೂರು, ನ. ೧೭: ಡಿಸೆಂಬರ್ ೩೦ ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ ೨೬ ರೊಳಗೆ ಮೀಸಲಾತಿ ಪಟ್ಟಿ ಒದಗಿಸಲು ಹೈಕೋರ್ಟ್ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಹಿನ್ನೆಲೆ ಇಂದು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿತು. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹೈಕೋರ್ಟ್ಗೆ ಹಾಜರಾಗಿದ್ದರು. ನ. ೨೬ ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಎಂದು ರಾಜ್ಯ ಸರ್ಕಾರದ ಪರವಾಗಿ ಹೈಕೋರ್ಟ್ಗೆ ಮಾಹಿತಿ ನೀಡಿದರು. ಇನ್ನು ನವೆಂಬರ್ ೨೬ ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸಿದರೆ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗದ ಪರ ವಕೀಲರು ಕೋರ್ಟ್ಗೆ ತಿಳಿಸಿದರು. ನ್ಯಾಯಾಲಯ ಈ ಹೇಳಿಕೆಗಳನ್ನು ದಾಖಲಿಸಿಕೊಂಡು ಡಿಸೆಂಬರ್ ೩೦ ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ದೇಶನ ನೀಡಿದೆ.
ಚಾಮರಾಜನಗರದಲ್ಲಿ ಭಾರೀ ಮಳೆ; ತುಂಬಿದ ಹಳ್ಳಕೊಳ್ಳ
ಚಾಮರಾಜನಗರ, ನ. ೧೭: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ನದಿಯಂತಾಗಿದ್ದು, ಪೋಷಕರ ಹೆಗಲ ಮೇಲೆ ಕುಳಿತು ವಿದ್ಯಾರ್ಥಿಗಳು ರಸ್ತೆ ದಾಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ಗ್ರಾಮದಲ್ಲಿ ಈ ಘಟನೆ ಜರುಗಿದೆ. ಕಳೆದ ಒಂದು ವಾರದಿಂದಲೂ ಹನೂರು ತಾಲೂಕಿನಾದ್ಯಂತ ಸುರಿದ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿದು, ರಸ್ತೆಗಳು ನದಿಯಾಗಿ ಮಾರ್ಪಟ್ಟಿವೆ. ಪರಿಣಾಮ ಮೀಣ್ಯಂ ಗ್ರಾಮದಿಂದ ಚಿಕ್ಕಚಿನ್ನೇಗೌಡಹಳ್ಳಿ ಗ್ರಾಮದಲ್ಲಿರುವ ಶಾಲೆಗೆ ರಸ್ತೆಯಲ್ಲಿ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಯಿತು. ಮಕ್ಕಳ ಸಮಸ್ಯೆಯನ್ನು ಅರಿತ ಪೋಷಕರು ಮಕ್ಕಳನ್ನು ಭುಜದ ಮೇಲೆ ಕೂರಿಸಿಕೊಂಡು ಹಾಗೂ ಎತ್ತಿಕೊಂಡು ರಸ್ತೆ ದಾಟಿಸಿದರು.
ಹಫ್ತಾ ವಸೂಲಿ ಪ್ರಕರಣ: ಬೀರ್ ಸಿಂಗ್ ‘ಘೋಷಿತ ಅಪರಾಧಿ'
ಮುಂಬೈ, ನ. ೧೭: ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬAಧಿಸಿದAತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ‘ಘೋಷಿತ ಅಪರಾಧಿ' ಎಂದು ಮುಂಬೈ ಕೋರ್ಟ್ ಬುಧವಾರ ಘೋಷಿಸಿದೆ. ತಲೆಮರೆಸಿಕೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ವಿರುದ್ಧ ಈಗಾಗಲೇ ಮೂರು ಬಾರಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದ್ದ ಮುಂಬೈ ಮ್ಯಾಜಿಸ್ಟೆçÃಟ್ ಕೋರ್ಟ್ ಇದೀಗ ಪೊಲೀಸ್ ಅಧಿಕಾರಿ ಘೋಷಿತ ಅಪರಾಧಿ ಎಂದು ಘೋಷಿಸಿದೆ. ಇದರಿಂದ ವಿವಾದಿತ ಮಾಜಿ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಪರಮ್ ಬೀರ್ ಸಿಂಗ್ ಅವರ ವಿರುದ್ಧ ದಾಖಲಾಗಿರುವ ಸುಲಿಗೆ ಪ್ರಕರಣಕ್ಕೆ ಸಂಬAಧಿಸಿದAತೆ ೩೦ ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನಿರಾಕರಿಸಿದರೆ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ. ಸಿಂಗ್ ಅವರನ್ನು "ಪರಾರಿ"ಯಾಗಿರುವ ಆರೋಪಿ ಎಂದು ಘೋಷಿಸುವಂತೆ ಕೋರಿ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಜಾಮೀನು ರಹಿತ ವಾರೆಂಟ್‌ಗಳನ್ನು ಹೊರಡಿಸಿದ್ದರೂ ಸಿಂಗ್ ಪತ್ತೆಯಾಗದ ಕಾರಣ ಸಿಐಡಿ ಈ ಕ್ರಮ ಕೈಗೊಂಡಿದೆ ಮತ್ತು ಈ ಕ್ರಮವು ಆತನನ್ನು ಪತ್ತೆಹಚ್ಚಲು ತನಿಖಾ ಸಂಸ್ಥೆಗೆ ಸಹಾಯ ಮಾಡುತ್ತದೆ. ಮಹಾರಾಷ್ಟç ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು ೧೦೦ ಕೋಟಿ ಹಫ್ತಾ ವಸೂಲಿ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು ಎಂದು ಪರಮ್ ಬೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬAಧ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಮಹಾರಾಷ್ಟç ವಿಕಾಸ್ ಅಘಾಡಿಯಲ್ಲೂ ಈ ಪತ್ರ ತೀವ್ರ ಸಂಚಲನ ಮೂಡಿಸಿತ್ತು. ಈ ಸಂಬAಧ ಜುಲೈ ೨೩ ರಂದು ಪರಮ್ ಬೀರ್ ಸಿಂಗ್, ಸಚಿನ್ ವಾಜೆ ಮತ್ತು ಇತರರ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂಬೈ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.
ಉಗ್ರರಿಗೆ ಪಾಕ್‌ನಲ್ಲಿ ಸಂಪೂರ್ಣ ಸ್ವಾತಂತ್ರö್ಯದ ಸೌಲಭ್ಯ: ತರಾಟೆ
ನ್ಯೂಯಾರ್ಕ್, ನ. ೧೭: ಪಾಕಿಸ್ತಾನದಲ್ಲಿ ಭಯೋತ್ಪಾದಕರು ಸಂಪೂರ್ಣ ಸ್ವಾತಂತ್ರö್ಯವನ್ನು ಅನುಭವಿಸುತ್ತಿದ್ದಾರೆ, ಆದರೆ ಅಲ್ಲಿನ ಅಲ್ಪಸಂಖ್ಯಾತ ಸಮುದಾಯದ ಜನರೂ ಸೇರಿದಂತೆ ಬೇರೆ ನಾಗರಿಕರ ಬದುಕು ಮಾತ್ರ ಬುಡಮೇಲಾಗಿದೆ ಎಂದು ಪಾಕಿಸ್ತಾನವನ್ನು ಭಾರತ ವಿಶ್ವಸಂಸ್ಥೆ ಭದ್ರತಾ ಪರಿಷತ್ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ ಪ್ರತಿನಿಧಿ, ರಾಯಭಾರಿ ಮುನೀರ್ ಅಕ್ರಮ್ ತಮ್ಮ ಭಾಷಣದ ಪ್ರಾರಂಭದಲ್ಲೇ ಜಮ್ಮು-ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದರು. ಪಾಕಿಸ್ತಾನದ ನಡೆಗೆ ತೀಕ್ಷ÷್ಣವಾಗಿ ಪ್ರತಿಕ್ರಿಯೆ ನೀಡಿರುವ ಭಾರತದ ಖಾಯಂ ಪ್ರತಿನಿಧಿ ಕಾಜಲ್ ಭಟ್, "ಪಾಕಿಸ್ತಾನ ವಿಶ್ವಸಂಸ್ಥೆಯಿAದ ನಿಷೇಧಕ್ಕೆ ಒಳಗಾದ ಉಗ್ರರ ಪೈಕಿ ಅತಿ ಹೆಚ್ಚು ಉಗ್ರರಿಗೆ ಆಶ್ರಯ ನೀಡಿರುವ ದಾಖಲೆಯನ್ನು ಹೊಂದಿದೆ ಅಷ್ಟೇ ಅಲ್ಲದೇ ಸಕ್ರಿಯಾಗಿ ಅಂತಹ ಭಯೋತ್ಪಾದಕರನ್ನು ಬೆಂಬಲಿಸುವ ಇತಿಹಾಸವನ್ನೂ ಹೊಂದಿದೆ" ಎಂದು ಆರೋಪಿಸಿದ್ದಾರೆ. ಭಾರತದ ವಿರುದ್ಧ ಅಪಪ್ರಚಾರ ಮಾಡುವುದಕ್ಕೆ ಪಾಕಿಸ್ತಾನದ ಪ್ರತಿನಿಧಿ ಜಾಗತಿಕ ಮಟ್ಟದ ವೇದಿಕೆಯನ್ನು ದುರುಪಯೋಗಪಡಿಸಿಳ್ಳಲು ನಡೆಸುತ್ತಿರುವ ವ್ಯರ್ಥ ಪ್ರಯತ್ನ ಇದೇ ಮೊದಲೇನು ಅಲ್ಲ ಎಂದು ಪಾಕಿಸ್ತಾನಕ್ಕೆ ತೀಕ್ಷ÷್ಣ ಪ್ರತಿಕ್ರಿಯೆಯನ್ನು ನೀಡಿದೆ ಭಾರತ. ಪಾಕಿಸ್ತಾನವೂ ಸೇರಿದಂತೆ ಎಲ್ಲಾ ನೆರೆ ರಾಷ್ಟçಗಳೊಂದಿಗೆ ಭಾರತ ಉತ್ತಮ ಸಂಬAಧ ಹೊಂದುವುದನ್ನು ಬಯಸುತ್ತದೆ. ಯಾವುದೇ ವಿಷಯವನ್ನಾದರೂ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವುದಕ್ಕೆ ಬದ್ಧವಾಗಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ತಿಳಿಸಿದೆ.