ಸೋಮವಾರಪೇಟೆ, ನ.೧೭: ರಾಜ್ಯ ವಿಧಾನ ಪರಿಷತ್‌ಗೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮೂಲಕ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿAದ ಹಾಸನ ಜಿಲ್ಲೆಯ ವ್ಯಕ್ತಿಗೆ ಟಿಕೆಟ್ ಫೈನಲ್ ಆಗಿದೆ ಎಂಬ ವದಂತಿಗಳು ಹೆಚ್ಚುತ್ತಿರುವ ಹಿನ್ನೆಲೆ, ಕಾಂಗ್ರೆಸ್‌ನಿAದ ಟಿಕೆಟ್ ಆಕಾಂಕ್ಷಿಯಾಗಿದ್ದ ಸ್ಥಳೀಯರಾದ ಕೆ.ಎಂ. ಲೋಕೇಶ್ ಹಾಗೂ ಬೆಂಬಲಿಗರು ಬೆಂಗಳೂರಿಗೆ ದೌಡಾಯಿಸಿದ್ದಾರೆ.

ನಿನ್ನೆ ದಿನ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ನೇತೃತ್ವದ ಮಹತ್ವದ ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆ ಸಂಬAಧ ಚರ್ಚೆಯಾಗಿದ್ದು, ಕೊಡಗಿನವರೇ ಆಗಿರುವ ಸೋಮವಾರಪೇಟೆ ಶಾಂತಳ್ಳಿ ನಿವಾಸಿ, ಕಾಂಗ್ರೆಸ್ ಮುಖಂಡ ಕೆ.ಎಂ. ಲೋಕೇಶ್ ಅವರಿಗೆ ಟಿಕೆಟ್ ನೀಡಬೇಕೆಂದು ನಿರ್ಣಯ ಕೈಗೊಂಡು ಕೆಪಿಸಿಸಿಗೆ ಕಳುಹಿಸಲಾಗಿದೆ.

ಈ ನಡುವೆ ದಿಡೀರ್ ಬೆಳವಣಿಗೆಯಲ್ಲಿ ಮಾಜಿ ಸಚಿವ, ಅರಕಲಗೂಡಿನ ಮಾಜಿ ಶಾಸಕ ಎ.ಮಂಜು ಅವರ ಪುತ್ರ ಡಾ. ಮಂಥರ್‌ಗೌಡ ಅವರು ಕೊಡಗಿನಿಂದ ವಿಧಾನ ಪರಿಷತ್ ಚುನಾವಣೆ ಎದುರಿಸಲು ಕಾಂಗ್ರೆಸ್‌ನಿAದ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವರಿಗೇ ಕೆಪಿಸಿಸಿ ಮಣೆ ಹಾಕಲಿದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದ್ದಂತೆ, ಸ್ಥಳೀಯ ಮುಖಂಡರು ಅಪಸ್ವರ ಎತ್ತುತ್ತಿದ್ದಾರೆ. ಈ ಹಿಂದೆ ಬಿ.ಎ. ಜೀವಿಜಯ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಸಂದರ್ಭ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಹೊತ್ತು ಪಕ್ಷವನ್ನು ಬಲಗೊಳಿಸುವಲ್ಲಿ ಲೋಕೇಶ್ ಶ್ರಮಿಸಿದ್ದಾರೆ.

ಕಳೆದ ೨೦ ವರ್ಷಗಳಿಂದಲೂ ಪಕ್ಷಕ್ಕಾಗಿ ದುಡಿದಿದ್ದಾರೆ. ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸಿದ್ದಾರೆ. ಇದರೊಂದಿಗೆ ಜಿಲ್ಲೆಯ ಇತರ ನಾಯಕರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದು, ಇವರಿಗೆ ಟಿಕೆಟ್ ತಪ್ಪಿದರೆ ಕೊಡಗು ಕಾಂಗ್ರೆಸ್‌ನ ನಿರ್ಣಯಕ್ಕೂ ಬೆಲೆ ಇಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ರಾಜ್ಯ ವರಿಷ್ಠರು ಗಮನ ಹರಿಸಬೇಕೆಂದು ಮುಖಂಡರು ಹಾಗೂ ಕಾರ್ಯಕರ್ತರು ‘ಶಕ್ತಿ’ಯೊಂದಿಗೆ ಅಸಮಾಧಾನ ಹೊರಹಾಕಿದ್ದಾರೆ.

ಕಳೆದ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಎ. ಮಂಜು ಅವರು ಇಂದಿಗೂ ಬಿಜೆಪಿಯಲ್ಲಿಯೇ ಇದ್ದು, ಅಧಿಕೃತವಾಗಿ ಕಾಂಗ್ರೆಸ್ ಸೇರಿಲ್ಲ. ಹಾಸನದಲ್ಲಿ ಬಿಜೆಪಿ ಪಕ್ಷದಿಂದ ಮಂಥರ್‌ಗೌಡ ಅವರಿಗೆ ಟಿಕೆಟ್ ಕೊಡಿಸುವ ಪ್ರಯತ್ನ ನಡೆಯುತ್ತಿದ್ದು, ಕೊಡಗಿನಲ್ಲಿ ಕಾಂಗ್ರೆಸ್‌ನಿAದ ಟಿಕೆಟ್ ಪಡೆಯುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಇದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡರು ಅಪಸ್ವರ ಎತ್ತಿದ್ದಾರೆ.

ಈ ನಡುವೆ ಕೊಡಗು ಕಾಂಗ್ರೆಸ್‌ನ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಗೊಂಡು ಕೆಪಿಸಿಸಿಗೆ ಹೆಸರು ಕಳುಹಿಸಲಾಗಿದ್ದ ಕೆ.ಎಂ. ಲೋಕೇಶ್ ಅವರಿಗೆ ಕೊನೆ ಕ್ಷಣದಲ್ಲಿ ಆಘಾತ ಎದುರಾಗಿದ್ದು, ಇದರ ಪ್ರತಿಫಲನ ಜಿಲ್ಲೆಯ ಇತರ ಕಾಂಗ್ರೆಸ್ ಮುಖಂಡರಲ್ಲೂ ಕಂಡುಬರುತ್ತಿದೆ.

ಡಿಸಿಸಿಯಿAದ ಲೋಕೇಶ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ವಿವಿಧ ಬ್ಲಾಕ್ ಅಧ್ಯಕ್ಷರುಗಳು, ಇನ್ನಿತರ ಮುಖಂಡರು ಸಭೆ ನಡೆಸಿ ಸ್ಥಳೀಯ ಅಭ್ಯರ್ಥಿಯ ಪರವಾಗಿ ಬ್ಯಾಟಿಂಗ್ ಮಾಡಿದ್ದರೂ, ಟಿಕೆಟ್ ಕೈತಪ್ಪುವ ಸಂಭವಗಳು ಅಧಿಕವಾಗಿರುವ ಹಿನ್ನೆಲೆ, ಮತ್ತೊಮ್ಮೆ ರಾಜ್ಯ ವರಿಷ್ಠರನ್ನು ಭೇಟಿ ಮಾಡಿ ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಮನವರಿಕೆ ಮಾಡಲು ಮುಖಂಡರು ಮುಂದಾಗಿದ್ದಾರೆ.

ಕೆ.ಎA. ಲೋಕೇಶ್ ಹಾಗೂ ಬೆಂಬಲಿಗರು ಈಗಾಗಲೇ ಬೆಂಗಳೂರಿಗೆ ದೌಡಾಯಿಸಿದ್ದು, ಪಕ್ಷದ ರಾಜ್ಯ ವರಿಷ್ಠರನ್ನು ಭೇಟಿ ಮಾಡಿ ತಮ್ಮ ವಾದ ಮುಂದಿಡುವ ಪ್ರಯತ್ನ ನಡೆಸಿದ್ದಾರೆ. ಕೊಡಗಿನ ಎಂಎಲ್‌ಸಿ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯವನ್ನು ಹೇರುತ್ತಿದ್ದಾರೆ. ಒಟ್ಟಾರೆ ಹಾಸನದ ಮಂಥರ್‌ಗೌಡ ಅವರ ಹೆಸರು ಕಾಂಗ್ರೆಸ್ ಎಂಎಲ್‌ಸಿ ಟಿಕೆಟ್‌ನೊಂದಿಗೆ ತಳುಕು ಹಾಕಿಕೊಂಡಿರುವುದರಿAದ ಸಹಜವಾಗಿಯೇ ಕೊಡಗಿನ ಕಾಂಗ್ರೆಸ್‌ನಲ್ಲಿ ಒಂದಿಷ್ಟು ಗೊಂದಲಗಳು ಕಂಡುಬರುತ್ತಿವೆ. - ವಿಜಯ್