ಗೋಣಿಕೊಪ್ಪ ವರದಿ, ನ. ೧೭: ಸರ್ಕಾರ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ಡಿಸೆಂಬರ್ ಒಂದರಿAದ ಅವಕಾಶ ಮಾಡಿಕೊಡಲಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವೀರಾಜಪೇಟೆ ತಾಲೂಕು ಬಿಜೆಪಿ ಕೃಷಿ ಮೋರ್ಚಾ ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ ತಿಳಿಸಿದ್ದಾರೆ.
ಶಾಸಕ ಕೆ.ಜಿ. ಬೋಪಯ್ಯ ಅವರನ್ನು ಕೃಷಿ ಮೋರ್ಚಾ ವತಿಯಿಂದ ಭೇಟಿ ಮಾಡಿ ಚರ್ಚಿಸಿದ ಸಂದರ್ಭ ಕೃಷಿ ಸಚಿವರಿಗೆ ಈ ಬಗ್ಗೆ ಮನವಿ ಮಾಡಿಕೊಂಡಿರುವುದಾಗಿ ಶಾಸಕರು ತಿಳಿಸಿದ್ದು, ರೈತರು ಬೆಂಬಲ ಬೆಲೆಯಲ್ಲಿ ಭತ್ತ ಮಾರಾಟ ಮಾಡಲು ಉತ್ಸುಕತೆ ತೋರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಹಕಾರ ಮಂಡಳಿ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ನವೆಂಬರ್ ೧೮ ರಂದು ಟಾಸ್ಕ್ಫೋರ್ಸ್ ಸಭೆ ನಡೆಸಿ, ಡಿಸೆಂಬರ್ ಒಂದರಿAದ ಖರೀದಿಗೆ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಖರೀದಿ ಮಾಡಿದ ಕೆಲವೇ ದಿನಗಳಲ್ಲಿ ರೈತರಿಗೆ ಹಣ ನೀಡುವುದಾಗಿ ಕೂಡ ತಿಳಿಸಿದ್ದಾರೆ. ಇದರಿಂದ ರೈತರಿಗೆ ಪ್ರಯೋಜನವಾಗಲಿದೆ ಎಂದರು. ಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ತೋರೀರ ವಿನು, ಕಾರ್ಯದರ್ಶಿ ಅಡ್ಡಂಡ ನಿಲನ್ ಮಂದಣ್ಣ ಇದ್ದರು.