*ಗೋಣಿಕೊಪ್ಪ, ನ. ೧೮: ಮಧುಮೇಹ ತಪಾಸಣಾ ಶಿಬಿರವನ್ನು ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರೀನ್ ಡಾಟ್ ಟ್ರಸ್ಟ್ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಲಾಯಿತು.
ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೩೦ ವರ್ಷ ಮೇಲ್ಪಟ್ಟವರಿಗೆ ಮಧುಮೇಹ ತಪಾಸಣೆಯನ್ನು ನಡೆಸಲಾಯಿತು. ಕಾನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಡಿ. ರಶ್ಮಿ, ಉಪಾಧ್ಯಕ್ಷ ಕೆ.ಯು. ಸಚಿನ್ ಸೋಮಣ್ಣ, ಸದಸ್ಯರುಗಳು, ಕೋತೂರು ಮಹಿಳಾ ಸಮಾಜದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ, ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.