ಸೋಮವಾರಪೇಟೆ, ನ. ೧೭: ಇಲ್ಲಿನ ಜೇನು ಕೃಷಿ ಸಹಕಾರ ಸಂಘದ ಕಟ್ಟಡದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಹುಳು ಮಿಶ್ರಿತ ಅಕ್ಕಿಯನ್ನು ಗ್ರಾಹಕರಿಗೆ ವಿತರಿಸಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಗೊಂಡಿದೆ.
ಇಂದು ಪಟ್ಟಣ ವ್ಯಾಪ್ತಿಯ ನೂರಾರು ಗ್ರಾಹಕರಿಗೆ ಪಡಿತರ ವಿತರಿಸಿದ್ದು, ಅನ್ನ ಭಾಗ್ಯ ಯೋಜನೆಯಡಿ ವಿತರಿಸಲಾದ ಅಕ್ಕಿಯಲ್ಲಿ ನೂರಾರು ಕುಟ್ಟೆಹುಳು ಗಳು ಕಂಡುಬAದಿದ್ದರಿAದ ಗ್ರಾಹಕರು, ನ್ಯಾಯಬೆಲೆ ಅಂಗಡಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಸಂಬAಧಿಸಿದ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿ, ಗ್ರಾಹಕರಿಗೆ ಗುಣಮಟ್ಟದ ಪಡಿತರ ವಿತರಿಸಲು ಕ್ರಮ ಕೈಗೊಳ್ಳಬೇಕು. ಕಳಪೆ ಗುಣಮಟ್ಟದ ಅಕ್ಕಿಯನ್ನು ಸರಬರಾಜು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ.ಪಂ. ಸದಸ್ಯ ಜೀವನ್ ಸೇರಿದಂತೆ ಇತರರು ಆಗ್ರಹಿಸಿದ್ದಾರೆ.