ಮಡಿಕೇರಿ, ನ. ೧೯: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ೨೦೨೧-೨೨ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ ಅರಿವು (ವಿದ್ಯಾಭ್ಯಾಸ ಸಾಲ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಶ್ರಮಶಕ್ತಿ ಯೋಜನೆ, ಮೈಕ್ರೋ ಕ್ರಿಡಿಟ್ ಯೋಜನೆ (ಸ್ವ-ಸಹಾಯ ಗುಂಪುಗಳಿಗೆ), ಆಟೋ ರಿಕ್ಷಾ, ಟ್ಯಾಕ್ಸಿ, ಸರಕು ವಾಹನ ಖರೀದಿಗೆ ಸಹಾಯಧನ, ಮೈಕ್ರೋ ಸಾಲ ಯೋಜನೆ (ವೈಯಕ್ತಿಕ) ಮಹಿಳೆಯರಿಗೆ ಮಾತ್ರ ಈ ಯೋಜನೆಗಳಡಿಯಲ್ಲಿ ನಿಗಮದಿಂದ ಸಾಲ ಹಾಗೂ ಸಹಾಯಧನ ಸೌಲಭ್ಯಗಳನ್ನು ನೀಡಲು ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ೧೮ ರಿಂದ ಮೇಲ್ಪಟ್ಟು ೪೫ ಹಾಗೂ ೫೫ ವರ್ಷದೊಳಗೆ ವಯೋಮಿತಿಯಿರಬೇಕು. ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿರುವವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಮತ್ತು ಆಧಾರ್‌ಕಾರ್ಡ್ನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು. ಈಗಾಗಲೇ ಸಾಲ ಮನ್ನಾ ಆಗಿರುವ ಫಲಾನುಭವಿಗಳಿಗೆ ಹೊಸದಾಗಿ ಸಾಲ ನೀಡಲಾಗುವುದಿಲ್ಲ. ಫಲಾನುಭವಿಯು ರಾಜ್ಯದ ಮತೀಯ ಅಲ್ಪಸಂಖ್ಯಾತರಾಗಿದ್ದು, ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ. ೮೧ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.೧,೦೩,೦೦೦ ಗಳ ಒಳಗಿರಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಎಲ್ಲಾ ಯೋಜನೆಗಳನ್ನು ಆನ್‌ಲೈನ್‌ನಲ್ಲಿ ನೋಂದಣಿ ಮಾಡಲು ಡಿಸೆಂಬರ್ ೧೫ ಕೊನೆಯ ದಿನವಾಗಿದೆ. ಹಾಗೂ ಆನ್‌ಲೈನ್‌ನಲ್ಲಿ hಣಣಠಿ://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಭರ್ತಿಯಾದ ಅರ್ಜಿಗಳನ್ನು ಪ್ರಿಂಟೌಟ್ ತೆಗೆದು ಸಂಬAಧಿಸಿದ ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸುವುದು. ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೦೪೪೯, ೮೯೭೧೨೮೨೯೩೨ ನ್ನು ಸಂಪರ್ಕಿಸಬಹುದು.