ಮಡಿಕೇರಿ, ನ. ೧೯: ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ೨೦೨೨ ಜನವರಿ ೧೬ರಂದು ಜರುಗಲಿರುವ ಪ್ರಸಕ್ತ ಸಾಲಿನ ಮೊದಲ ಹಂತದ ಎನ್.ಟಿ.ಎಸ್.ಇ. ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಕೆ.ವಿ. ಸುರೇಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ನೋಡಲ್ ಅಧಿಕಾರಿ ಕುಮಾರ ಸ್ವಾಮಿ ಹೆಚ್.ಎಂ. ಮೊ.೯೧೪೧೦೮೧೮೩೫, ವೆಬ್ಸೈಟ್ : hಣಣಠಿs://ssಟಛಿ.ಞಚಿಡಿಟಿಚಿಣಚಿಞಚಿ.gov.iಟಿ ಬಳಕೆ ಮಾಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ೩೦.೧೧.೨೦೨೧ ಆಗಿದೆ.