ಗೋಣಿಕೊಪ್ಪಲು, ನ.೧೯: ರೈತರಿಗೆ ಮಾರಕವಾಗಿದ್ದ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಗೋಣಿಕೊಪ್ಪಲುವಿನಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ರೈತ ಸಂಘದ ಕೇಂದ್ರ ಕಚೇರಿಯಲ್ಲಿ ಸಮಾಗಮಗೊಂಡ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಮುಖ್ಯ ರಸ್ತೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ನಡೆಸಿದರು. ಈ ವೇಳೆ ಮಾತನಾಡಿದ ರೈತ ಸಂಘದ ಪ್ರ.ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ ಕಳೆದ ಒಂದು ವರ್ಷದಿಂದ ದೇಶದ ರೈತಾಪಿ ವರ್ಗ,ಅನ್ನದಾತರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹಗಲು ರಾತ್ರಿ ಎನ್ನದೆ ಹೋರಾಟ ನಡೆಸಿದ್ದರು.
ಭಾರತ್ ಬಂದ್ ಮಾಡುವ ಮೂಲಕ ಕಾಯ್ದೆಗಳನ್ನು ಕೈ ಬಿಡಲು ಒತ್ತಾಯಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರ ರೈತ ವಿರೋಧಿ ಮೂರು ಕೃಷಿ ಕಾಯ್ದೆಯನ್ನು ಹಿಂದಕ್ಕೆ ಪಡೆದಿದೆ. ಇದರಿಂದಾಗಿ ರೈತರ ಹೋರಾಟಕ್ಕೆ ನ್ಯಾಯ ದೊರಕಿದೆ ಎಂದರು. ವಿಜಯೋತ್ಸವ ಕಾರ್ಯಕ್ರಮದಲ್ಲಿ ರೈತ ಸಂಘದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ ಮಾತನಾಡಿದರು.
ವಿಜಯೋತ್ಸವ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಹೋಬಳಿ ಅಧ್ಯಕ್ಷ ಆಲೆಮಾಡ ಮಂಜುನಾಥ್, ಹುದಿಕೇರಿ ಹೋಬಳಿ ಅಧ್ಯಕ್ಷ ಚಂಗುಲAಡ ಸೂರಜ್,ಬಾಳೆಲೆ ಹೋಬಳಿ ಅಧ್ಯಕ್ಷ ಮೆಚಂಡ ಕಿಶ ಮಾಚಯ್ಯ, ಪೊನ್ನಂಪೇಟೆ ಅಧ್ಯಕ್ಷ ಚೊಟ್ಟೆಕಾಳಪಂಡ ಮನು, ಮಾಯಮುಡಿ ಅಧ್ಯಕ್ಷ ಪುಚ್ಚಿಮಾಡ ರಾಯ್ ಮಾದಪ್ಪ, ನಲ್ಲೂರು ಅಧ್ಯಕ್ಷ ತೀತರಮಾಡ ರಾಜ, ಮುಖಂಡರಾದ ಕೋದೇಂಗಡ ಸುರೇಶ್, ಗಾಣಂಗಡ ಉತ್ತಯ್ಯ, ಪೆಮ್ಮಂಡ ಉಮೇಶ್, ವಾಸಪ್ಪ, ಕಾಡ್ಯಮಾಡ ಎಂ.ಜೀವನ್, ಎಂ.ಬಿ.ಅಶೋಕ್, ಚಪ್ಪುಡೀರ ರೋಷನ್, ಕರುಂಬಯ್ಯ, ಮಧು ತಮ್ಮಯ್ಯ, ಯೋಗೇಶ್, ಕಾವೇರಪ್ಪ ಮುಂದಾದವರು ಉಪಸ್ಥಿತರಿದ್ದರು.